ಸಾಂದರ್ಭಿಕ ಚಿತ್ರ 
ದೇಶ

ಐಎನ್ಎಕ್ಸ್ ಮೀಡಿಯಾ ಕೇಸ್: ಕಾರ್ತಿ ಚಿದಂಬರಂ ಸಿಎಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು

ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಕಾರ್ತಿ ಚಿದಂಬರಂ ಅವರ ಚಾರ್ಟೆರ್ಡ್ ....

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಕಾರ್ತಿ ಚಿದಂಬರಂ ಅವರ ಚಾರ್ಟೆರ್ಡ್ ಅಕೌಂಟೆಂಡ್ ಎಸ್.ಭಾಸ್ಕರರಾಮನ್ ಅವರಿಗೆ ದೆಹಲಿ ಕೋರ್ಟ್ ಇಂದು ಜಾಮೀನು ನೀಡಿದೆ.

ಫೆಬ್ರವರಿ 16ರಂದು ದೆಹಲಿಯ ಸ್ಟಾರ್ ಹೊಟೇಲ್ ನಿಂದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಭಾಸ್ಕರರಾಮನ್ ಬಂಧಿತರಾಗಿದ್ದರು. ಅವರಿಗೆ ಇಂದು ವಿಶೇಷ ನ್ಯಾಯಾಧೀಶ ಸುನಿಲ್ ರಾಣಾ ಜಾಮೀನು ಮಂಜೂರು ಮಾಡಿದ್ದಾರೆ.

ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ 2 ಲಕ್ಷ ಬಾಂಡ್ ಮತ್ತು ಅಷ್ಟೇ ಮೊತ್ತದ ಭದ್ರತೆಯನ್ನು ನ್ಯಾಯಾಲಯಕ್ಕೆ ಕಟ್ಟುವಂತೆ ಕೋರ್ಟ್ ಷರತ್ತು ವಿಧಿಸಿದೆ. ಹಾಗೂ ಮುಂದಿನ ದಿನಗಳಲ್ಲಿ ತನಿಖೆ ವೇಳೆ ಎಲ್ಲಾ ರೀತಿಯ ಸಹಕಾರವನ್ನು ಜಾರಿ ನಿರ್ದೇಶನಾಲಯಕ್ಕೆ ನೀಡಬೇಕೆಂದು ಮತ್ತು ಪೂರ್ವಾನುಮತಿಯಿಲ್ಲದೆ ದೇಶ ಬಿಟ್ಟು ಹೋಗದಂತೆ ಭಾಸ್ಕರರಾಮನ್ ಅವರಿಗೆ ಆದೇಶ ನೀಡಲಾಗಿದೆ.

ತಮ್ಮ ಕಸ್ಟಡಿ ವಿಚಾರಣೆ ಅಗತ್ಯವಿಲ್ಲವೆಂದು ಮತ್ತು ತಮ್ಮನ್ನು ಬಂಧನದಲ್ಲಿಡುವ ಯಾವುದೇ ಅವಶ್ಯಕತೆಯಿಲ್ಲ ಎಂದು ಕೋರಿ ಭಾಸ್ಕರರಾಮನ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT