ಪ್ರತಾಪ್ ದುದ್ದತ್ ಮತ್ತು ಜಗದೀಶ್ ಪಾಂಚಾಲ್ 
ದೇಶ

ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಶಾಸಕರ ಮಾರಾಮಾರಿ!

ಗುಜರಾತ್ ವಿಧಾನಸಭೆಯಲ್ಲಿ ಶಾಸಕರ ನಡುವೆ ನಡೆದ ವಾದ-ವಿವಾದ ತಾರಕಕ್ಕೇರಿ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಪರಸ್ಪರ ಕೈ-ಕೈ ಮಿಲಾಯಿಸಿರುವ ಘಟನೆ ನಡೆದಿದೆ...

ನವದೆಹಲಿ: ಗುಜರಾತ್ ವಿಧಾನಸಭೆಯಲ್ಲಿ ಶಾಸಕರ ನಡುವೆ ನಡೆದ ವಾದ-ವಿವಾದ ತಾರಕಕ್ಕೇರಿ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಪರಸ್ಪರ ಕೈ-ಕೈ ಮಿಲಾಯಿಸಿರುವ ಘಟನೆ ನಡೆದಿದೆ.
ಕೃಷಿ ಸಚಿವ ಆರ್ .ಸಿ ಫಲ್ಡು ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಕಾಂಗ್ರೆಸ್ ಶಾಸಕರು ಇದಕ್ಕೆ ಅಡ್ಡಿ ಪಡಿಸಿದ್ದಾರೆ. ಇದರಿಂದ ತಾಳ್ಮೆ ಕಳೆದುಕೊಂಡ ಬಿಜೆಪಿ ಸದಸ್ಯರು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಕಾಂಗ್ರೆಸ್ ಶಾಸಕ ಪ್ರತಾಪ್ ದುದತ್ ಬಿಜೆಪಿಯ ಜಗದೀಶ್ ಪಾಂಚಾಲ್ ಗೆ ಹೊಡೆದಿದ್ದಾರೆ.
ನಂತರ ಪಾಂಚಾಲ್ ಏಟಿಗೆ ಏದಿರೇಟು ನೀಡಿದ್ದಾರೆ, ಇಬ್ಬರು ಪರಸ್ಪರ ಕೈ-ಕೈ ಮಿಲಾಯಿಸಿದ್ದಾರೆ. ಉಳಿದ ಶಾಸಕರು ಅವರನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದರು. ಅಲ್ಲಿಯೂ ಪರಸ್ಪರ ವಾಗ್ಯುದ್ದ ಮುಂದುವರಿಯಿತು. ನಂತರ ಮಾರ್ಷಲ್ ಗಳು ಅವರನ್ನು ಸದನದಿಂದ ಹೊರಗೆ ಹಾಕಿದರು.
ಪ್ರತಾಪ್ ದುದ್ದತ್ ಅವರನ್ನು ಸದ್ಯ ಅಧಿವೇಶನದಿಂದ ಅಮಾನತು ಮಾಡಲಾಗಿದ್ದು ಉಳಿದ ಕಾಂಗ್ರೆಸ್ ಶಾಸಕರು ಬಿಜೆಪಿ ವಿರುದ್ದ ಪ್ರತಿಭಟನೆ ನಡೆಸಿದರು. ಇದೇ ರೀತಿಯ ಘಟನೆ ತೆಲಂಗಾಣ ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT