ದೇಶ

ನೀರವ್ ಮೋದಿ, ಮೆಹುಲ್ ಚೋಕ್ಸಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಗೆ ಇಡಿ ಮನವಿ

Lingaraj Badiger
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 12,700 ಕೋಟಿ ರುಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದ ವ್ಯಾಪಾರಿ ನೀರವ್‌ ಮೋದಿ ಮತ್ತು ಅವರ ಅಂಕಲ್,  ಗೀತಾಂಜಲಿ ಜೆಮ್ಸ್ ನ ಮೆಹುಲ್ ಚೋಕ್ಸಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಇಂಟರ್ ಪೋಲ್ ಗೆ ಮನವಿ ಮಾಡಿದೆ.
ಅಕ್ರಮ ಹಣ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರು ಆರೋಪಿಗಳ ವಿರುದ್ಧ ಕೋರ್ಟ್ ಈಗಾಗಲೇ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ್ದು, ಇದನ್ನು ಆದರಿಸಿ ರೆಡ್ ಕಾರ್ನರ್ ನೋಟಿಸ್ ಗೆ ಮನವಿ ಮಾಡಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರುಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ನೀರವ್ ಮೋದಿ ಹಾಗೂ ಜೋಕ್ಸಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಜಾರಿ ನಿರ್ದೇಶನಾಲಯ ಸಿಬಿಐ ಮೂಲಕ ಇಂಟರ್ ಪೋಲ್ ಗೆ ಮನವಿ ಸಲ್ಲಿಸಿದೆ. 
ಸಿಬಿಐ ಸಹ ಈಗಾಗಲೇ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
SCROLL FOR NEXT