ರಾಜನಾಥ್ ಸಿಂಗ್ 
ದೇಶ

ಕಾನೂನು ಜಾರಿ ಸಂಸ್ಥೆಗಳಿಗೆ ಸಮಾಜಿಕ ಜಾಲತಾಣಗಳು ಗಂಭೀರ ಸವಾಲು: ಗೃಹ ಸಚಿವ ರಾಜನಾಥ್ ಸಿಂಗ್

ಸಾಮಾಜಿಕ ಜಾಲತಾಣಗಳು ಕಾನೂನು ಜಾರಿ ಸಂಸ್ಥೆಗಳಿಗೆ ಸವಾಲಾಗುತ್ತಿವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ಸಾಮಾಜಿಕ ಜಾಲತಾಣಗಳು ಕಾನೂನು ಜಾರಿ ಸಂಸ್ಥೆಗಳಿಗೆ ಸವಾಲಾಗುತ್ತಿವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. 
ಪೊಲೀಸ್ ಮುಖ್ಯಸ್ಥರ ಅಂತಾರಾಷ್ಟ್ರೀಯ ಒಕ್ಕೂಟದ ಏಷ್ಯಾ ಪೆಸಿಫಿಕ್ ಪ್ರಾದೇಶಿಕ ಕಾನ್ಫರೆನ್ಸ್ ನ್ನುದ್ದೇಶಿಸಿ ಮಾತನಾಡಿರುವ ರಾಜನಾಥ್ ಸಿಂಗ್ ಸಮಾಜದಲ್ಲಿನ ಕೆಡುಕನ್ನು ತಡೆಗಟ್ಟುವುದಕ್ಕೆ ನಾಗರಿಕರು ಹಾಗೂ ಪೊಲೀಸರು ಒಟ್ಟಿಗೆ ಕಾರ್ಯನಿರ್ವಹಿಸುವುದಿಲ್ಲವಾದ್ದರಿಂದ ಹೆಚ್ಚಿನ ಅಪರಾಧ ಪ್ರಕರಣಗಳು ನಡೆಯುತ್ತಿವೆ ಎಂದು ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 
ಆರಕ್ಷಕರಿಗೆ ಸಮಾಜಿಕ ಜಾಲತಾಣವೂ ಹೆಚ್ಚಿನ ಸವಾಲೊಡ್ಡುತ್ತಿದೆ. ಫೇಕ್ ಖಾತೆಗಳು, ಆರ್ಥಿಕ ಅಪರಾಧಗಳು, ಮಾಲ್‌ವೇರ್, ಡ್ರಗ್ ಮಾರಾಟ ಸೇರಿದಂತೆ ವಿವಿಧ ರೀತಿಯ ಅಪರಾಧಗಳಿಗೆ ಸಾಮಾಜಿಕ ಜಾಲತಾಣಾಗಳೂ ಸಹ ದಾರಿಯಾಗಿದ್ದು, ಸಾಮಾಜಿಕ ಜಾಲತಾಣಗಳು ಕಾನೂನು ಜಾರಿ ಸಂಸ್ಥೆಗಳಿಗೆ ಸವಾಲೊಡ್ಡುತ್ತಿವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. 
2013 ರಲ್ಲಿ ಉತ್ತರ ಪ್ರದೇಶದ ಮುಜಫರ್ ನಗರ ಗಲಭೆಗಳಾದಾಗ ಸಮಾಜಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಬಳಕೆ ಮಾಡಿದ್ದವು ಎಂದು ಸರ್ಕಾರ ಹೇಳಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!