ಕೋಲ್ಕತಾ: ಉತ್ತರ ಪ್ರದೇಶ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನೆಡೆ ಅನುಭವಿಸಿದ್ದು, ಈ ಕುರಿತು ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಅಂತ್ಯ ಈಗ ಆರಂಭವಾಗಿದೆ ಎಂದಿದ್ದಾರೆ.
'ದೊಡ್ಡ ಗೆಲುವು, ಅಭಿನಂದನೆಗಳು ಮಾಯಾವತಿ ಜಿ ಮತ್ತು ಅಖಿಲೇಶ್ ಯಾದವ್ ಜಿ. ಅಂತ್ಯ ಆರಂಭವಾಗಿದೆ' ಎಂದು ಪಶ್ಚಿಮ ಬಂಗಾಳ ಸಿಎಂ ಟ್ಟೀಟ್ ಮಾಡಿದ್ದಾರೆ.
ಉತ್ತರ ಪ್ರದೇಶದ ಎರಡು ಲೋಕಸಭಾ ಸ್ಥಾನಗಳಲ್ಲೂ ಆಡಳಿತರೂಢ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಐದು ಬಾರಿ ಪ್ರತಿನಿಧಿಸಿದ್ದ ಗೋರಖ್ ಪುರದಲ್ಲಿ ಸಮಾಜವಾದಿ ಪಕ್ಷದ ಪ್ರವೀಣ್ ಕುಮಾರ್ ನಿಶಾದ್ ಅವರು 17ನೇ ಸುತ್ತಿನಲ್ಲೂ 26,960 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಉಪೇಂದ್ರ ದತ್ ಶುಕ್ಲಾ ಅವರು ಎರಡನೇ ಸ್ಥಾನದಲ್ಲಿದ್ದಾರೆ.