ಹಲಿಯ ಪಟಿಯಾಲಾ ಹೌಸ್ ಕೋರ್ಟ್ ಆವರಣದಲ್ಲಿ ಕಾರ್ತಿ ಚಿದಂಬರಂ 
ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಮಾರ್ಚ್ 26 ರವರಗೆ ಇಡಿ ಬಂಧನದಿಂದ ಕಾರ್ತಿ ಚಿದಂಬರಂ ಬಚಾವ್!

ಐಎನ್ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ಆರೋಪಿಯಾಗಿರುವ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಮಾ.26 ರವ್ರೆಗೆ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆಯುವಂತಿಲ್ಲ.....

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ಆರೋಪಿಯಾಗಿರುವ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಮಾ.26ರವ್ರೆಗೆ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆಯುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ.
ಈ ಹಿಂದೆ ಮಾ.20ರವರೆಗೆ ಎಂದಿದ್ದ ತನ್ನ ಅಆದೇಶವನ್ನೇ ಮತ್ತೆ ಆರು ದಿನ  ದಿನ ವಿಸ್ತರಿಸಿದ ಹೈಕೋರ್ಟ್ ಕಾರ್ತಿ ಅವರಿಗೆ ಮಧ್ಯಂತರ ಪರಿಹಾರ ನೀಡಿದೆ.  
ನ್ಯಾಯಮೂರ್ತಿಗಳಾದ ಎಸ್. ಮುರಳಿಧರ್ ಮತ್ತು ಐ ಎಸ್ ಮೆಹ್ತಾ ಅವರನ್ನೊಳಗೊಂಡ ಪೀಠವು ವಿಚಾರಣ ದಿನಾಂಕವನ್ನು ಆರು ದಿನಗಳ ಮಟ್ಟಿಗೆ ವಿಸ್ತರಿಸಿ ಆದೇಶಿಸಿದೆ. ಕಾರ್ತಿ ಚಿದಂಬರಂ ಅವರನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಪಿಲ್ ಸಿಬಲ್ ಮಾ.20 ರಂದು ಲಭ್ಯವಿಲ್ಲದಿರುವ ಕಾರಣ ವಿಚಾರಣಾ ದಿನಾಂಕವನ್ನು ಮುಂದೂಡಲಾಗಿದೆ.
ಹೆಚ್ಚುವರಿ ಸಾಲಿಸಿಟರ್ ಜನರಲ್   ತುಷಾರ್ ಮೆಹ್ತಾ ವಿಚಾರಣಾ ದಿನಾಂಕವನ್ನು ಮಾರ್ಚ್ 22 ಕ್ಕೆ ಬದಲಿಸಿದರೆ ಯಾವುದೇ ಆಕ್ಷೇಪಗಳಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ನ್ಯಾಯಾಲಯವು ಮಾ.26ಕ್ಕೆ ಅರ್ಜಿಯ ವಿಚಾರಣೆ ನಡೆಸುವುದಾಗಿ ತೀರ್ಮಾನಿಸಿದೆ. 
ಜಾರಿ ನಿರ್ದೇಶನಾಲಯದಿಂದ ಯಾವುದೇ ಆಕ್ಷೇಪವಿಲ್ಲದ ಕಾರಣ 26ಕ್ಕೆ ವಿಚಾರಣೆ ಕೈಗೊಳ್ಳ್ಲಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಇದಕ್ಕೂ ಮುನ್ನ  ಕಾರ್ತಿ ವಿರುದ್ಧ ಜಾರಿಯಲ್ಲಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾ.20 ರವರೆಗೆ ಯಾವುದೇ ಕ್ರಮ ತೆಗೆದುಕೊಳ್ಳಬಾರದೆಂದು ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ