ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಜೆಎನ್ ಯು ಪ್ರೊಫೆಸರ್ ವಿರುದ್ಧ ಎಫ್ ಐ ಆರ್
ತರಗತಿಯಲ್ಲಿ ಮಹಿಳಾ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಜವಹರ್ ಲಾಲ್ ನೆಹರು ವಿವಿ ಪ್ರೊಫೆಸರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ...
ನವದೆಹಲಿ: ತರಗತಿಯಲ್ಲಿ ಮಹಿಳಾ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಜವಹರ್ ಲಾಲ್ ನೆಹರು ವಿವಿ ಪ್ರೊಫೆಸರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ವಿವಿಯಲ್ಲಿ ಲೈಫ್ ಸೈನ್ಸ್ ಪಾಠ ಮಾಡುವ ಅತುಲ್ ಜೊಹ್ರಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ 9 ವಿದ್ಯಾರ್ಥಿಗಳ ಪ್ರೊಫೆಸರ್ ವಿರುದ್ದ ಪ್ರತಿಭಟನೆ ನಡೆಸಿದ್ದರು.
9 ವಿದ್ಯಾರ್ಥಿನಿಯರಲ್ಲಿ 7 ವಿದ್ಯಾರ್ಥಿಗಳು ದಾಖಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ದೆಹಲಿಯ ವಸಂತ್ ಕುಂಜ್ ನಾರ್ತ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 354 ಮತ್ತು 509 ರ ಅಡಿಯಲ್ಲಿ ಕೇಸ್ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.