ಬಂಡಿಪೋರ: ಜಮ್ಮು ಮತ್ತು ಕಾಶಅಮೀರದ ಹಜಿನ್ ನಲ್ಲಿ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಉಗ್ರರ ಗುಂಪೊಂದು ನಂತರ ಸ್ಥಳದಿಂದ ಕಾಲ್ಕಿತ್ತಿದ್ದು, ಉಗ್ರರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಶುಕ್ರವಾರ ತಿಳಿದುಬಂದಿದೆ.
ಖೋಸಾದಲ್ಲಿರುವ ಸೈಯದ್ ಮೊಹಲ್ಲಾ ಬಳಿ ಬಂದಿರುವ ಉಗ್ರರು ಇಂದು ಬೆಳಿಗ್ಗೆ ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿವೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಉಗ್ರರು ತಾಳಿ ನಡೆಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದಿರುವ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ವಿರುದ್ಧ ವಿಶೇಷ ಭದ್ರತಾ ಪಡೆ, ರಾಷ್ಟ್ರೀಯ ರೈಫಲ್ಸ್, ಸಿಆರ್'ಪಿಎಫ್ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.