ಸಾಂದರ್ಭಿಕ ಚಿತ್ರ 
ದೇಶ

2016ರಲ್ಲಿ ಒಂದು ಲಕ್ಷ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ದಾಖಲು : ಸುಪ್ರೀಂಕೋರ್ಟ್

2016ರಲ್ಲಿ ದೇಶಾದ್ಯಂತ ಸುಮಾರು ಒಂದು ಲಕ್ಷ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿವೆ.229 ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯದಲ್ಲಿ ಈ ವರ್ಷದಲ್ಲಿ ತೀರ್ಮಾನಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಮಾಹಿತಿ ನೀಡಿದೆ.

ನವದೆಹಲಿ:  2016ರಲ್ಲಿ  ದೇಶಾದ್ಯಂತ ಸುಮಾರು ಒಂದು ಲಕ್ಷ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿವೆ. ಈ ಪೈಕಿ ಕೇವಲ 229 ಪ್ರಕರಣಗಳನ್ನು  ವಿಚಾರಣಾ ನ್ಯಾಯಾಲಯದಲ್ಲಿ ಈ ವರ್ಷದಲ್ಲಿ ತೀರ್ಮಾನಿಸಲಾಗಿದೆ ಎಂದು  ಸುಪ್ರೀಂಕೋರ್ಟ್ ಮಾಹಿತಿ ನೀಡಿದೆ.

ಇತ್ಯರ್ಥಗೊಳ್ಳದ  ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಮಾಹಿತಿ ಸಂಗ್ರಹಿಸಿ ಅವರ ವಿರುದ್ಧ ಪೋಕ್ಸೊ ಕಾಯ್ದೆ ದಾಖಲಿಸುವಂತೆ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ,  ದೇಶದಲ್ಲಿನ ಎಲ್ಲಾ ಹೈಕೋರ್ಟ್ ಗಳ ರಿಜಿಸ್ಟ್ರಾರ್ ಜನರಲ್ ಗೆ ಸೂಚನೆ ನೀಡಿದ ನಂತರ ಈ ಅಂಕಿ ಅಂಶ ಬೆಳಕಿಗೆ ಬಂದಿದೆ.

ಇಂತಹ ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯ ಚಾರ್ಚ್ ಶೀಟ್  ಸಲ್ಲಿಕೆಗೆ ಗಮನ ನೀಡಿದ ನಂತರ ಒಂದು ವರ್ಷದೊಳಗೆ ಇವುಗಳನ್ನು ತೀರ್ಮಾನಿಸಲು ಕಾಯ್ದೆಯಲ್ಲಿ ಅವಕಾಶವಿದೆ.

8 ತಿಂಗಳ ಬಾಲಕಿ ಮೇಲೆ ನಡೆದ ಅತ್ಯಾಚಾರ ಸಂಬಂಧ ವಕೀಲ ಅಲಾಕ್  ಅಲೋಕ್  ಶ್ರೀವಾಸ್ತವ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೊ 1, 01, 326 ಪೊಕ್ಸೊ ಪ್ರಕರಣಗಳಲ್ಲಿ 229 ಪ್ರಕರಣಗಳನ್ನು ಈ ವರ್ಷದಲ್ಲಿ ವಿಚಾರಣೆ ನಡೆಸಲು ವಿಚಾರಣಾ ನ್ಯಾಯಾಲಯ ತೀರ್ಮಾನಿಸಿದೆ ಎಂದು ತಿಳಿಸಿದೆ.

ನ್ಯಾಯಾಧೀಶರಾದ ಎ.ಎಂ. ಖನ್ವೀಲ್ ಕರ್ ಹಾಗೂ ಡಿ. ವೈ. ಚಂದ್ರಚೂಡ ಅವರು ಈ ಪೀಠದಲ್ಲಿದ್ದು, ಇತ್ಯರ್ಥಗೊಳ್ಳಬೇಕಾಗಿರುವ ಪ್ರಕರಣಗಳ  ವಿಚಾರಣೆಗೆ ಪರಿಹಾರ ಒದಗಿಸಬೇಕಾಗಿದ್ದು, ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಹೈಕೋರ್ಟ್ ಗಳಿಗೆ ಸೂಚನೆ ನೀಡಿದ್ದಾರೆ.

12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲಾಗುವ ಅತ್ಯಾಚಾರಕ್ಕೆ ಪ್ರಕರಣಗಳ ತನಿಖೆಗಾಗಿ ಸೂಕ್ತ ಮಾರ್ಗಸೂತ್ರ ರಚಿಸುವಂತೆಯೂ ಅರ್ಜಿಯಲ್ಲಿ ತಿಳಿಸಲಾಗಿದೆ. ಕಾರಣ ಪೋಕ್ಸೋ ಕಾಯ್ದೆಯಡಿ  ಪ್ರಕರಣ ದಾಖಲಿಸಿಲು 6 ತಿಂಗಳು ಪೂರ್ಣಗೊಂಡಿರಬೇಕಾಗುತ್ತದೆ.
 ಇತ್ಯರ್ಥಗೊಳ್ಳದ ಪ್ರಕರಣಗಳ  ಬಗ್ಗೆ ಜಿಲ್ಲಾ ವ್ಯಾಪಿ ಸಮಗ್ರ ಮಾಹಿತಿಯನ್ನು ಸಂಗ್ರಹಿಸುವಂತೆ ಹೈಕೋರ್ಟಿನ ರಿಜಿಸ್ಟ್ರಾರ್ ಜನರಲ್ ಗೆ ಸೂಚಿಸಿ ಮುಂದಿನ ವಿಚಾರಣೆನ್ನು ಏಪ್ರಿಲ್ 20ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT