ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ, 5 ಸಾವು 
ದೇಶ

ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ, ಒಂದೇ ಕುಟುಂಬದ ಐವರ ಸಾವು

ಪಾಕಿಸ್ತಾನ ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು ಐವರು ನಾಗರಿಕರು ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರ: ಪಾಕಿಸ್ತಾನ ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು ಒಂದೇ ಕುಟುಂಬದ ಐವರು ನಾಗರಿಕರು ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. 
ಮೃತರನ್ನು 35 ವರ್ಷದ ಮೊಹಮ್ಮದ್ ರಂಜಾನ್, ಅವರ ಪತ್ನಿ ಮಲಿಕಾ ಬೇ 32  ಹಾಗೂ ಈ ದಂಪತಿಗಳ ಇಬ್ಬರು ಪುತ್ರರಾದ 14 ವರ್ಷದ ಅಬ್ದುಲ್ ರೆಹಮಾನ್ 12 ವರ್ಷದ ಮೊಹಮ್ಮದ್ ರಿಜ್ವಾನ್ ಹಾಗೂ 7 ವರ್ಷದ 7 ವರ್ಷದ ರಜಾಕ್ ರಂಜಾನ್ ಎಂದು ಗುರುತಿಸಲಾಗಿದೆ. 
ಜಮ್ಮು-ಕಾಶ್ಮೀರ ಡಿಜಿಪಿ ಎಸ್ ಪಿ ವೈದ್  ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿರುವುದರ ವಿಡಿಯೋವನ್ನು ಎಎನ್ಐ ಬಿಡುಗಡೆ ಮಾಡಿದೆ.  ಪಾಕಿಸ್ತಾನ-ಭಾರತದ ನಡುವೆ ರಾಯಭಾರಿ ಅಧಿಕಾರಿಗಳ ಬಿಕ್ಕಟ್ಟು ಉಂಟಾಗಿರುವ ಬೆನ್ನಲ್ಲೆ ಈ ಘಟನೆಯೂ ಸಂಭವಿಸಿದೆ. 
ಅತ್ತ ಪಾಕಿಸ್ತಾನವೂ ಭಾರತದ ವಿರುದ್ಧ ಕದನ ವಿರಾಮ ಉಲ್ಲಂಘನೆ ಆರೋಪ ಮಾಡಿದೆ. ಅಷ್ಟೇ ಅಲ್ಲದೇ ತನ್ನ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದೂ ಪಾಕ್ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ