ಮೋದಿ ಸರ್ಕಾರಕ್ಕೆ ಅಧಿಕಾರದ ಮದ: ಸೋನಿಯಾ ಗಾಂಧಿ
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಅಧಿಕಾರದ ಮದವೇರಿದೆ ಎಂದು ಆರೋಪಿಸಿದ್ದಾರೆ.
ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಅಧಿಕಾರದ ಮದವೇರಿದೆ ಎಂದು ಆರೋಪಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಆರ್ ಎಸ್ಎಸ್ ವಿರುದ್ಧ ಒಂದಾಗಲು ಕರೆ ನೀಡಿರುವ ಸೋನಿಯಾ ಗಾಂಧಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಡ್ರಾಮಾಬಾಜಿ ಸರ್ಕಾರ ಎಂದು ಟೀಕಿಸಿದ್ದು ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜಕೀಯ ದ್ವೇಷದ ಆರೋಪವನ್ನೂ ಮಾಡಿರುವ ಸೋನಿಯಾ ಗಾಂಧಿ, ಕೇಂದ್ರ ಸರ್ಕಾರ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾರ್ತಿ ಚಿದಂಬರಂ ಹಾಗೂ ಇನ್ನೂ ಅನೇಕ ಕಾಂಗ್ರೆಸ್ ನಾಯಕರ ವಿರುದ್ಧ ತನಿಖೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ಸಹ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು, ದೇಶ ಈಗ ದಿಕ್ಕೆಟ್ಟ ಪರಿಸ್ಥಿತಿಯಲ್ಲಿದೆ. ಕಾಂಗ್ರೆಸ್ ಮಾತ್ರ ದೇಶಕ್ಕೆ ಒಂದು ಮಾರ್ಗ ತೋರಬಲ್ಲದು ಎಂದು ಹೇಳಿದ್ದಾರೆ.