ಸೋತವರ ಹತಾಶೆಯ ನುಡಿಯಂತಿದೆ : ರಾಹುಲ್ ಹೇಳಿಕೆಗೆ ನಿರ್ಮಲಾ ತಿರುಗೇಟು
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ 84 ನೇ ಅಧಿವೇಶನ್ನುದ್ದೇಶಿಸಿ ಮಾಡಿದ ಭಾಷಣಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.
ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ 84 ನೇ ಅಧಿವೇಶನ್ನುದ್ದೇಶಿಸಿ ಮಾಡಿದ ಭಾಷಣಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.
ಅಧಿಕಾರದ ದಾಹಕ್ಕಾಗಿ ಬಿಜೆಪಿಯನ್ನು ಕೌರವರಿಗೆ ಹೋಲಿಸಿರುವ ಕಾಂಗ್ರೆಸ್, ಪಾಂಡವರಂತೆ ನ್ಯಾಯಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿರುವುದು ಸೋತವರ ಹತಾಶೆಯ ನುಡಿಯಂತಿದೆ ಎಂದು ನಿರ್ಮಲಾ ಸೀತಾರಾಮನ್ ಟೀಕಿಸಿದ್ದಾರೆ.
ಪಾಂಡವರಂತೆ ಗುರುತಿಸಿಕೊಳ್ಳಲು ಇಚ್ಚಿಸಿಕೊಳ್ಳುವ ಕಾಂಗ್ರೆಸ್ ರಾಮನ ಅಸ್ತಿತ್ವವನ್ನೇ ಪ್ರಶ್ನಿಸುತ್ತದೆ. ಹಿಂದೂ ಸಮುದಾಯ ಹಾಗೂ ಆಚರಣೆಗಳನ್ನು ವಿರೋಧಿಸುತ್ತದೆ ಎಂದರು.
ಇದಕ್ಕೂ ಮುನ್ನ ಹೇಳಿಕೆ ನೀಡಿದ ರಾಹುಲ್ ಗಾಂಧಿ, ಬಿಜೆಪಿ ಹಾಗೂ ಆರ್ ಎಸ್ ಎಸ್ ಕುರುಕ್ಷೇತ್ರದಲ್ಲಿನ ಕೌರವರ ರೀತಿಯಲ್ಲಿದ್ದು, ಕಾಂಗ್ರೆಸ್ ಪಾಂಡವರ ರೀತಿಯಲ್ಲಿ ಸತ್ಯ ಹಾಗೂ ನ್ಯಾಯಯುತವಾಗಿ ಹೋರಾಟ ಮಾಡುತ್ತದೆ ಎಂದು ಹೇಳಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.