ಲಖನೌ: ಕಳೆದ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಿ ಒಂದು ವರ್ಷ ಪೂರೈಸಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರದ ವಿರುದ್ಧ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಯೋಗಿ ಆದಿತ್ಯನಾಥ ಸರ್ಕಾರ ಒಂದು ವರ್ಷದಲ್ಲಿ ಕೆಟ್ಟ ಉದಾಹರಣೆಗಳನ್ನು ಹುಟ್ಟುಹಾಕಿದ್ದಾರೆ. ಇನ್ನು ಯೋಗಿ ಸರ್ಕಾರದ ವರ್ಷವನ್ನು ಜನರು ಮೌಲ್ಯೀಕರಿಸಿದ್ದು ಲೋಕಸಭೆ ಉಪಚುನಾವಣೆಯಲ್ಲಿ ಉತ್ತರಪ್ರದೇಶದ ಗೋರಖ್ ಪುರ ಮತ್ತು ಫುಲ್ಪುರ್ ಕ್ಷೇತ್ರದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು ಯೋಗಿ ಸರ್ಕಾರಕ್ಕೆ ಜನರು ಶೂನ್ಯ ಫಲಿತಾಂಶ ನೀಡಿದ್ದಾರೆ ಎಂದರು.
ಬಿಜೆಪಿ ತನ್ನ ಒಂದು ವರ್ಷದ ಅಧಿಕಾರವಧಿಯನ್ನು ಸಂಭ್ರಮಿಸುವ ಬದಲು ತಮ್ಮ ವೈಫಲ್ಯಗಳನ್ನು ಗಂಭೀರ ವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದು ಯೋಗಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಯೋಗಿ ಆದಿತ್ಯನಾಥ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದರ ಜತೆಗೆ ಕೋಮುಗಲಭೆಯನ್ನು ಸೃಷ್ಟಿಸಿದ್ದರ ಪರಿಣಾಮ ಆದಿತ್ಯನಾಥ ಸೋಲು ಕಾಣದ ಗೋರಖ್ ಪುರದಲ್ಲಿ ಬಿಜೆಪಿ ಹೀನಾಯ ಸೋಲು ಕಾಣುವಂತಾಯಿತು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics