ರಾಂಚಿ: ಬಹುಕೋಟಿ ಮೇವು ಹಗರಣದ ನಾಲ್ಕನೇ ಕೇಸ್ ನಲ್ಲಿಯೂ ಬಿಹಾರ ಮಾಜಿ ಸಿಎಂ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ರಾಂಚಿಯ ಜಾರ್ಖಂಡ್ ಕೋರ್ಟ್ ತೀರ್ಪು ನೀಡಿದೆ.
ಇನ್ನೂ ಮತ್ತೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ನಿಕಟವರ್ತಿ ಜಗನ್ನಾಥ್ ಮಿಶ್ರಾ ಅವರನ್ನು ನಿರ್ದೋಷಿ ಎಂದು ತೀರ್ಪು ನೀಡಲಾಗಿದೆ.
ಜಗನಾಥ್ ಮಿಶ್ರಾ ಮತ್ತು ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಯಿಂದ ನೇರವಾಗಿ ಕೋರ್ಟ್ ಗೆ ಆಗಮಿಸಿದ್ದರು.
ಬಿಹಾರ ಸರ್ಕಾರದ ನಿಧಿಯನ್ನು ಬಳಸಿಕೊಂಡು ಬಹುಕೋಟಿ ಮೇವು ಹಗರಣದಲ್ಲಿ ಸಿಲುಕಿಕೊಂಡಿದ್ದರು. 1990 ರಲ್ಲಿ ಲಾಲು ಪ್ರಸಾದ್ ಯಾದವ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿತ್ತು.
ಲಾಲೂ ಪ್ರಸಾದ್, ಜಗನ್ನಾಥ್ ಮಿಶ್ರಾ ಸೇರಿದಂತೆ 30 ಮಂದಿಯನ್ನು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ, ಮೊದಲ ಕೇಸ್ ನಲ್ಲಿ ಅಂದರೇ 2013 ರಲ್ಲಿ ನೀಡಿದ ತೀರ್ಪಿನಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ವರ್ಷ ಜೈಲು ಶಿಕ್ಷೆಯಾಗಿತ್ತು, ಮೂರನೇ ಪ್ರಕರಣ ಸಂಬಂಧ ಜನವರಿಯಲ್ಲಿ ಶಿಕ್ಷೆ ನೀಡಲಾಗಿತ್ತು. ಮೇವು ಹಗರಣವನ್ನು ಸಿಬಿಐ ನಿಂದ ಪಾಟ್ನಾ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿತ್ತು.