ರಾಜಕೀಯ ಆಟದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಮೀರಿಸಲು ಯಾರಿಂದಲೂ ಸಾಧ್ಯವಿಲ್ಲ: ರಾಮ್ ಮಾಧವ್
ರಾಜಕೀಯ ಆಟದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಮೀರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಸೋಮವಾರ ಹೇಳಿದ್ದಾರೆ...
ನವದೆಹಲಿ: ರಾಜಕೀಯ ಆಟದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಮೀರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಸೋಮವಾರ ಹೇಳಿದ್ದಾರೆ.
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಚಂದ್ರಬಾಬು ನಾಯ್ಡು ಅವರು ತಿರುಗಿ ಬಿದ್ದಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಜಕೀಯ ತಂತ್ರಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಚಂದ್ರಬಾಬು ನಾಯ್ಡು ಪ್ರಸಿದ್ಧರಾಗಿದ್ದಾರೆ. ರಾಜಕೀಯ ಆಟದಲ್ಲಿ ಅವರನ್ನು ಮೀರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಆಂಧ್ರಪ್ರದೇಶ ರಾಜ್ಯದ ಅಭಿವೃದ್ಧಿಗಾಗಿ ನಾವು ಅವರೊಂದಿಗಿದ್ದೇವೆ. ಆಧರೆ,ಅವರು ರಾಜಕೀಯ ನಾಟಕದ ಕುರಿತು ಮಾತನಾಡುತ್ತಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಬಹುತೇಕ ರಾಜಕೀಯ ಆಟಗಳನ್ನು ಟಿಡಿಪಿ ಆಡುತ್ತಿದೆ.
ಟಿಡಿಪಿಯವರ ಅವಿಶ್ವಾಸ ನಿರ್ಣಯ ಮಂಡನೆಯಿಂದ ನಾವು ಹೆದರುವುದಿಲ್ಲ. ಸಂಸತ್ತಿನಲ್ಲಿ ನಾವು ಬಹು ಸಂಖ್ಯೆಯನ್ನು ಹೊಂದಿದ್ದೇವೆ. ಟಿಡಿಪಿಯವರ ನಿಲುವು ರಾಜಕೀಯ ಪ್ರೇರಿತವಾದದ್ದು. ಇದ್ದಕ್ಕಿದ್ದಂತೆಯೇ ಟಿಡಿಪಿಯವರು ಭಾವನಾತ್ಮಕ ವಿಚಾರಗಳನ್ನು ಹಿಡಿದಿರು ಇದೀಗ ನಮ್ಮ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದ್ದಾರೆ. ಇದಕ್ಕೆ ಆಂಧ್ರಪ್ರದೇಶ ಜನತೆಗೆ ಅವರೇ ಉತ್ತರ ನೀಡಬೇಕಿದೆ ಎಂದು ತಿಳಿಸಿದ್ದಾರೆ.