ದೇಶ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ: ಪವನ್ ಕಲ್ಯಾಣ್ ಯೂಟರ್ನ್

Lingaraj Badiger
ಅಮರಾವತಿ: ಈ ಹಿಂದೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದ್ದ ತೆಲುಗು ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಅವರು ಈಗ ಯೂಟರ್ನ್ ಹೊಡೆದಿದ್ದು, ವಿಶೇಷ ಸ್ಥಾನ ಮಾನದ ಹಣೆಪಟ್ಟಿ ಮುಖ್ಯ ಅಲ್ಲ. ಆರ್ಥಿಕ ನೆರವು ಮುಖ್ಯ ಎಂದು ಸೋಮವಾರ ಹೇಳಿದ್ದಾರೆ.
ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿದ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು, ರಾಜ್ಯಕ್ಕೆ ವಿಶೇಷ ಸ್ಥಾನಮಾನ ಮುಖ್ಯ ಅಲ್ಲ. ಕೇಂದ್ರ ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವುದು ಮುಖ್ಯ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯದ ಬೇಡಿಕೆ ಈಡೇರಿಸುವವರೆಗೆ ಬಿಜೆಪಿಯೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ತೆಲುಗು ಸೂಪರ್ ಸ್ಟಾರ್ ಮತ್ತು ಕಾಂಗ್ರೆಸ್ ನಾಯಕ ಚಿರಂಜೀವಿ ಅವರ ಕಿರಿಯ ಸಹೋದರ ಪವನ್ ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷ ಕೇಂದ್ರ ಸರ್ಕಾರ ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲು ವಿಶೇಷ ಪ್ಯಾಕೇಜ್ ನೀಡಿದ್ದನ್ನು ಒಪ್ಪಿಕೊಂಡಿದ್ದ ಟಿಡಿಪಿ ವಿರುದ್ಧ ಪವನ್ ಕಲ್ಯಾಣ್ ತೀವ್ರ ವಾಗ್ದಾಳಿ ನಡೆಸಿದ್ದರು. 
ಕೇಂದ್ರದ ವಿಶೇಷ ಪ್ಯಾಕೇಜ್ 'ಹಳಸಿದ ಲಡ್ಡು' ಎಂದಿದ್ದ ಪವನ್ ಕಲ್ಯಾಣ್, ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡದಿದ್ದರೆ ಅನಿರ್ಧಿಷ್ಟಾವಧಿ ಉಪವಾಸ ನಡೆಸುವುದಾಗಿ ಬೆದರಿಕೆ ಹಾಕಿದ್ದರು.
SCROLL FOR NEXT