ಕುಪ್ವಾರ: ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ...
ಕುಪ್ವಾರ(ಜಮ್ಮು ಮತ್ತು ಕಾಶ್ಮೀರ): ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
ಅರಂಪೋರಾದ ಅರಣ್ಯ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರ ಮೇಲೆ ಭಾರತೀಯ ಸೇನೆ ಮತ್ತು ರಾಜ್ಯ ಪೊಲೀಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಸದೆಬಡೆದಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಇನ್ನು ಭಯೋತ್ಪಾದಕರು ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ದಾಳಿ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿಯಾಗಿ ಭದ್ರತಾ ಪಡೆಗಳನ್ನು ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.