ನವದೆಹಲಿ: ಇರಾಕ್ ನಲ್ಲಿ 39 ಭಾರತೀಯರನ್ನು ಹತ್ಯೆ ಮಾಡಿರುವ ಬಗ್ಗೆ ಪ್ರಧಾನಿ ಟ್ವೀಟ್ ಮಾಡಿದ್ದು ಭಾರತೀಯರನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡಿತ್ತು ಎಂದು ಹೇಳಿದ್ದಾರೆ.
ಮೊಸೂಲ್ ನಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರ ಕುಟುಂಬ ಸದಸ್ಯರೊಂದಿಗೆ ಪ್ರತಿಯೊಬ್ಬ ಭಾರತೀಯನೂ ದುಃಖ ಹಂಚಿಕೊಳ್ಳುತ್ತಾನೆ. ಮೃತರ ಕುಟುಂಬದವರೊಂದಿಗೆ ನಾವಿದ್ದೇವೆ, ಮೊಸೂಲ್ ನಲ್ಲಿ ಮೃತಪಟ್ಟ ಭಾರತೀಯರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.
ಅಪಹರಣಗೊಂಡ ಭಾರತೀಯರನ್ನು ರಕ್ಷಿಸಲು ಸುಷ್ಮಾ ಸ್ವರಾಜ್ ಹಾಗೂ ವಿಕೆ ಸಿಂಗ್ ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದರು. ವಿದೇಶದಲ್ಲಿರುವ ನಮ್ಮ ಸಹೋದರ ಸಹೋದರಿಯರ ರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.