ವೆಂಕಯ್ಯ, ನಾಯ್ಡು 
ದೇಶ

ರಾಜ್ಯಸಭೆಯಲ್ಲಿ ಪದೇಪದೆ ಗದ್ದಲ: ಸಂಸದರ ಔತಣಕೂಟ ರದ್ದುಪಡಿಸಿದ ವೆಂಕಯ್ಯ ನಾಯ್ಡು

ರಾಜ್ಯಸಭೆ ಸದಸ್ಯರು ಪದೇ ಪದೇ ಕಲಾಪಕ್ಕೆಅಡ್ಡಿಪಡಿಸುತ್ತಿರುವುದರಿಂದ ಬೇಸರಗೊಂಡ...

ನವದೆಹಲಿ: ರಾಜ್ಯಸಭೆ ಸದಸ್ಯರು ಪದೇ ಪದೇ ಕಲಾಪಕ್ಕೆಅಡ್ಡಿಪಡಿಸುತ್ತಿರುವುದರಿಂದ ಬೇಸರಗೊಂಡ ಸಭಾಧ್ಯಕ್ಷ ಹಾಗೂ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಮೇಲ್ಮನೆ ಸದಸ್ಯರಿಗಾಗಿ ಬುಧವಾರ ಆಯೋಜಿಸಿದ್ದ ಔತಣಕೂಟವನ್ನು ರದ್ದುಪಡಿಸಿದ್ದಾರೆ.
ಔತಣ ಕೂಟಕ್ಕಾಗಿ ಕಳೆದ ವಾರದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ರಾಷ್ಟ್ರಪತಿ, ಪ್ರಧಾನ ಮಂತ್ರಿ, ಉಭಯ ಸದನಗಳ ಸಭಾ ನಾಯಕರು, ವಿರೋಧ ಪಕ್ಷದ ನಾಯಕರು ಹಾಗೂ ರಾಜಕೀಯ ಪಕ್ಷಗಳ ಮುಖಂಡರನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಬಜೆಟ್​ ಅಧಿವೇಶನ ಪ್ರಾರಂಭವಾದ ದಿನದಿಂದಲೂ ರಾಜ್ಯ ಸಭೆಯಲ್ಲಿ ಸುಗಮ ಕಲಾಪ ನಡೆದಿಲ್ಲ. ರಾಜ್ಯಸಭಾ ಸದಸ್ಯರು ಕಲಾಪಕ್ಕೆ ಅಡ್ಡಿ ಪಡಿಸುತ್ತಿದ್ದರು. ನಾಯ್ಡು ಅವರು ಮಂಗಳವಾರ ಸಹ ಪರಿಸ್ಥಿತಿ ಸುಧಾರಿಸಬಹುದು ಎಂದು ಕಾಯುತ್ತಿದ್ದರು. ಆದರೆ ಇಂದೂ ರಾಜ್ಯ ಸಭೆಯಲ್ಲಿ ಗದ್ದಲ ಮುಂದುವರೆದಿತ್ತು.
ಈ ಹಿನ್ನೆಲೆಯಲ್ಲಿ ನಾಯ್ಡು ಅವರು ರಾಜಕೀಯ ಪಕ್ಷಗಳ ನಾಯಕರನ್ನು ತಮ್ಮ ಕಚೇರಿಗೆ ಕರೆದು ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಕುರಿತು ಅಸಮಧಾನ ವ್ಯಕ್ತಪಡಿಸಿದ್ದರು. ಜತೆಗೆ ಇದೇ ಸಂದರ್ಭದಲ್ಲಿ ಔತಣಕೂಟವನ್ನು ರದ್ದುಪಡಿಸಿರುವ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel