ರಜನಿಕಾಂತ್ 
ದೇಶ

ಬಿಜೆಪಿ ಅಲ್ಲ, ದೇವರು ಮತ್ತು ಜನರು ಮಾತ್ರ ನನ್ನ ಹಿಂದೆ ಇದ್ದಾರೆ: ರಜನಿಕಾಂತ್

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ನಟನೆಯಿಂದ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು ತಮ್ಮ ಹಿಂದೆ ದೇವರು ಮತ್ತು ಜನರು ಮಾತ್ರ ಇದ್ದಾರೆ...

ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ನಟನೆಯಿಂದ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು ತಮ್ಮ ಹಿಂದೆ ದೇವರು ಮತ್ತು ಜನರು ಮಾತ್ರ ಇದ್ದಾರೆ ಬಿಜೆಪಿಯಲ್ಲ ಎಂದು ಹೇಳಿದ್ದಾರೆ. 
ಆಧ್ಯಾತ್ಮಿಕ ಯಾತ್ರೆಯನ್ನು ಮುಗಿಸಿ ಬಂದಿರುವ ರಜನಿಕಾಂತ್ ಅವರು ಪತ್ರಕರ್ತರೊಂದಿಗೆ ಮಾತನಾಡಿದ್ದು ಈ ವೇಳೆ ಅವರು ನನ್ನ ಹಿಂದೆ ದೇವರು ಮತ್ತು ಜನರು ಮಾತ್ರ ಇದ್ದಾರೆ ಹೊರತು ಬಿಜೆಪಿಯವರಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.
ರಜನಿಕಾಂತ್ ಅವರು ಆಧ್ಯಾತ್ಮಿಕ ಯಾತ್ರೆ ವೇಳೆ ಕೆಲ ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ್ದಾರೆ ಎಂದು ಆರೋಪಿಸಲಾಗಿತ್ತು.  ಈ ಆರೋಪವನ್ನು ರಜನಿಕಾಂತ್ ಅವರು ತಳ್ಳಿ ಹಾಕಿದ್ದಾರೆ. 
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ಸೂಚಿಸುವ ಸಲುವಾಗಿ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ರಾಮ ರಾಜ್ಯ ರಥ ಯಾತ್ರೆಯನ್ನು ಕೈಗೊಂಡಿದ್ದು ಮಂಗಳವಾರ ಈ ಯಾತ್ರೆ ತಮಿಳುನಾಡಿಗೆ ಎಂಟ್ರಿ ಕೊಟ್ಟಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಜನಿಕಾಂತ್ ಅವರು ರಾಜ್ಯ ಜಾತ್ಯತೀತವಾಗಿದೆ. ಇನ್ನು ರಾಜ್ಯದಲ್ಲಿ ಯಾವುದೇ ರೀತಿಯ ಕೋಮುಗಲಬೆಗಳು ನಡೆಯದಂತೆ ಸರ್ಕಾರ ಭದ್ರತೆ ಒದಗಿಸಬೇಕು ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video