ಅಜ್ಮೀರ್ ದರ್ಗಾ 
ದೇಶ

ಅಜ್ಮೀರ್ ಶರೀಫ್ ಯಾತ್ರಾರ್ಥಿಗಳಿಗೆ ವೀಸಾ ನೀಡಲು ಭಾರತ ನಿರಾಕರಣೆ: ಪಾಕ್ ಆರೋಪ

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆಜ್ಮೀರ್ ಶರೀಫ್ ದರ್ಗಾಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ವೀಸಾ ನೀಡಲು ಭಾರತದ ವಿದೇಶಾಂಗ ಸಚಿವಾಲಯ ತಿರಸ್ಕರಿಸಿದೆ ಎಂದು ತಿಳಿಸಿದೆ.

ನವದೆಹಲಿ:ರಾಯಬಾರಿಗಳಿಗೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ನವದೆಹಲಿ ಹಾಗೂ ಇಸ್ಲಾಮಾಬಾದ್ ನಡುವಿನ ವ್ಯವಹಾರಿಕ ಸಂಬಂಧ ಹದಗೆಟ್ಟಿರುವ ಬೆನ್ನಲ್ಲೇ ಪಾಕಿಸ್ತಾನ ಮತ್ತೊಂದು ಆರೋಪ ಮಾಡಿದೆ. ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆಜ್ಮೀರ್ ಶರೀಫ್ ದರ್ಗಾಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ವೀಸಾ ನೀಡಲು ಭಾರತದ ವಿದೇಶಾಂಗ ಸಚಿವಾಲಯ ತಿರಸ್ಕರಿಸಿದೆ ಎಂದು ತಿಳಿಸಿದೆ.

ಅಜ್ಮೀರ್ ನಲ್ಲಿ ನಿನ್ನೆಯಿಂದ ಆರಂಭಗೊಂಡಿರುವ  ಹಜರತ್ ಖಾವಾಜ್ ಮೊಯಿನುದ್ದೀನ್ ಚಿಷ್ಟಿ ಉರುಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉದ್ದೇಶಿಸಿದ್ದ 503 ಪಾಕಿಸ್ತಾನದ ಯಾತ್ರಾರ್ಥಿಗಳಿಗೆ ಭಾರತ ವೀಸಾ ನೀಡದಿರುವುದು ತೀವ್ರ ಅಸಮಾಧಾನ ಮೂಡಿಸಿದೆ ಎಂದು ಪಾಕಿಸ್ತಾನ ಹೇಳಿಕೆ ನೀಡಿದೆ.

1974ರ ಭಾರತ ಹಾಗೂ ಭಾರತ ಒಪ್ಪಂದ ಪ್ರಕಾರ ದರ್ಗಾಗಳು ಹಾಗೂ ಮತ್ತಿತರ ವಾರ್ಷಿಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶವಿದೆ. ಆದರೆ, ಭಾರತದ ನಿರ್ಧಾರದಿಂದಾಗಿ  ಪ್ರಸಿದ್ಧ ಉರುಸ್ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಯಾತ್ರಾರ್ಥಿಗಳು ಭಾಗವಹಿಸದಂತಾಗಿದೆ  ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

 ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಭಾರತ, ವೀಸಾ ಅರ್ಜಿಯಲ್ಲಿನ ಮಾಹಿತಿ ಪರಿಶೀಲನೆಗೆ ಪಾಕಿಸ್ತಾನ ಸರ್ಕಾರ ತಿರಸ್ಕರಿಸಿದೆ. ಇಂತಹ ಭೇಟಿ ಸಂದರ್ಭದಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಕೆಲವೊಂದು ಪ್ರಕ್ರಿಯೆ ನಡೆದ ಬಳಿಕ ವೀಸಾ ನೀಡಲಾಗುತ್ತದೆ. ಆದಾಗ್ಯೂ ಅಗತ್ಯ ಭದ್ರತೆಗಾಗಿ ಆಗ್ಗಾಗ್ಗೇ ಇಂತಹ ಭೇಟಿ ಮಾಡುವುದು ಸಾಧ್ಯವಿಲ್ಲ. ಹಿಂದೆ ಕೆಲವೊಂದು ಘಟನೆ ನಡೆದಾಗಲೂ ಉಭಯ ದೇಶಗಳಿ ಕಡೆಯಿಂದಲೂ ಇಂತಹ ಯಾವುದೇ ಭೇಟಿಗೆ ಅವಕಾಶ ನೀಡಿರಲಿಲ್ಲ ಎಂದು ತಿಳಿಸಲಾಗಿದೆ.

ನವದೆಹಲಿಯಲ್ಲಿನ ಪಾಕಿಸ್ತಾನ ಹೈ ಕಮೀಷರ್ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡುತ್ತಿಲ್ಲ ಎಂದು ಪಾಕಿಸ್ತಾನ ಆರೋಪಿಸಿತ್ತು. ಇಸ್ಲಾಬಾದ್ ನಲ್ಲಿರುವ ಭಾರತೀಯ ಹೈ ಕಮೀಷನ್ ಕೂಡಾ ತಮ್ಮಗೆ  ಪಾಕಿಸ್ತಾನದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ