ಶಶಿಕಲಾ ನಟರಾಜನ್ 
ದೇಶ

ಪತಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಶಶಿಕಲಾಗೆ 15 ದಿನಗಳ ಜಾಮೀನು ಮಂಜೂರು

ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರು 15 ದಿನಗಳ ಜಾಮೀನು ಮಂಜೂರು ಮಾಡಲಾಗಿದೆ.

ಚೆನ್ನೈ : ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ.ಶಶಿಕಲಾ ಅವರಿಗೆ  15 ದಿನಗಳ ಜಾಮೀನು ಮಂಜೂರು ಮಾಡಲಾಗಿದೆ.

ಅಕ್ರಮ ಆಸ್ತಿ ಗಳಿಗೆ ಪ್ರಕರಣದಲ್ಲಿ ದೋಷಿಯಾಗಿರುವ ಶಶಕಲಾ ಅವರು ನಗರದ ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ 4 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಪತಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ ರಸ್ತೆ ಮಾರ್ಗವಾಗಿ ತಂಜಾವೂರು ಕಡೆಗೆ ಶಶಿಕಲಾ ಪ್ರಯಾಣ ಬೆಳೆಸಿದ್ದಾರೆ.

ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ  ಶಶಿಕಲಾ ಅವರ ಪತಿ ಎಂ. ನಟರಾಜನ್  ಅವರು ಚೆನ್ನೈನ ಗ್ಲೆನೇಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ  1-35 ರ ಸುಮಾರಿನಲ್ಲಿ ನಿಧನ ಹೊಂದಿದ್ದರು.

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ನಟರಾಜನ್ ಅವರಿಗೆ ಕಳೆದ ವರ್ಷ ಯಕೃತ್ ಕಸಿ ಮಾಡಲಾಗಿತ್ತು.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ನಾಲ್ಕು ವರ್ಷ ಜೈಲು ಶಿಕ್ಷೆಗೊಳಗಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ   ಕೇಂದ್ರ ಕಾರಾಗೃಹದಲ್ಲಿ ಕಳೆದ ವರ್ಷದ ಫೆಬ್ರವರಿಯಿಂದಲೂ ಶಿಕ್ಷೆ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT