ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢ; 19 ವರ್ಷದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ವಿಷಪ್ರಾಶನ: ನಾಲ್ವರ ಬಂಧನ

ಛತ್ತೀಸ್ ಗಢದ ಜಂಗೀರ್‌ - ಚಂಪಾ ಜಿಲ್ಲೆಯಲ್ಲಿ ಓರ್ವ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರು 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ...

ಕೋರ್ಬಾ : ಛತ್ತೀಸ್ ಗಢದ ಜಂಗೀರ್‌ - ಚಂಪಾ ಜಿಲ್ಲೆಯಲ್ಲಿ ಓರ್ವ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರು 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಆಕೆಗೆ ವಿಷ ಉಣಿಸಿದ್ದು, ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.
ಎರಡು ವಾರಗಳ ಹಿಂದೆ ಈ ಘಟನೆ ನಡೆದಿದ್ದು, ಎಲ್ಲಾ ಆರೋಪಿಗಳನ್ನು ನಿನ್ನೆ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಳೆದ ಮಾರ್ಚ್ 7ರಂದು ಖರೋದ್‌ ಗ್ರಾಮದ ಶೇವರಿನಾರಾಯಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಈ ಕುರಿತು ನಿನ್ನೆಯಷ್ಟೇ ದೂರು ದಾಖಲಾಗಿದ್ದು, ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶೇವರಿ ನಾರಾಯಣ ಪೊಲೀಸ್‌ ಠಾಣಾಧಿಕಾರಿ ತಿಳಿಸಿದ್ದಾರೆ.
ಮಾ.7ರಂದು ತನ್ನ ಮನೆಯಲ್ಲಿ ಒಂಟಿಯಾಗಿದ್ದಾಗ 12ನೇ ತರಗತಿಯ ವಿದ್ಯಾರ್ಥಿನಿ ಮೊಬೈಲ್‌ ಗೆ ಆರೋಪಿ ಸಾಗರ್‌ ಯಾದವ್‌ (24) ಎಂಬಾತನಿಂದ ಕರೆ ಬಂತು. "ನಿನ್ನ ಸ್ನೇಹಿತೆಯೊಬ್ಬಳು ಇಲ್ಲೇ ಎಲ್ಲೋ ನಿನಗಾಗಿ ಕಾಯತ್ತಿದ್ದಾಳೆ; ನಿನಗೆ ಅಲ್ಲಿ  ಡ್ರಾಪ್‌ ಕೊಡುತ್ತೇನೆ' ಎಂದು ಹೇಳಿ ಆಕೆಯನ್ನು ತನ್ನ ಬೈಕ್‌ನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಒಯ್ದಿದ್ದ. ಅಲ್ಲಿ ಆತನ ಸ್ನೇಹಿತರಾದ ಲವ ನೋನಿಯಾ (28), ಕುಶ್‌ಕುಮಾರ್‌ ನೋನಿಯಾ (26) ಮತ್ತು 16ರ ಹರೆಯದ ಒಬ್ಬ ಹುಡುಗ ಸೇರಿಕೊಂಡು ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌ ಎಸಗಿ ಬಳಿಕ ಆಕೆಯನ್ನು ಕೊಲ್ಲುವ ಉದ್ದೇಶದಿಂದ ವಿಷಪ್ರಾಶನ ಮಾಡಿಸಿದ್ದಾರೆ.
ವಿದ್ಯಾರ್ಥಿನಿ ಹೇಗೋ ಕಷ್ಟಪಟ್ಟು ತನ್ನ ಮನೆ ತಲುಪಿ, ಪ್ರಜ್ಞೆ ಕಳೆದುಕೊಳ್ಳುವ ಮೊದಲು ತನ್ನ ದಾರುಣ ಸ್ಥಿತಿಯನ್ನು ಹೆತ್ತವರಿಗೆ ವಿವರಿಸಿದ್ದಾಳೆ. ಅವರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT