ನಟ ರಜನಿಕಾಂತ್ 
ದೇಶ

ತಮಿಳುನಾಡಿನ ಧಾರ್ಮಿಕ ಸಾಮರಸ್ಯವನ್ನು ಹಾಳು ಮಾಡಬಾರದು: ನಟ ರಜನಿಕಾಂತ್

ರಾಜ್ಯದ ಜನತೆ ಶಾಂತಿ ಹಾಗೂ ಸಾಮರಸ್ಯದಿಂದ ಬದುಕಲು ಬಯಸುತ್ತಾರೆ. ತಮಿಳುನಾಡು ರಾಜ್ಯದ ಧಾರ್ಮಿಕ ಸಾಮರಸ್ಯವನ್ನು ಹಾಳು ಮಾಡಬಾರದು ಎಂದು ನಟ ರಜನಿಕಾಂತ್ ಅವರು ಮಂಗಳವಾರ ಹೇಳಿದ್ದಾರೆ...

ಚೆನ್ನೈ; ರಾಜ್ಯದ ಜನತೆ ಶಾಂತಿ ಹಾಗೂ ಸಾಮರಸ್ಯದಿಂದ ಬದುಕಲು ಬಯಸುತ್ತಾರೆ. ತಮಿಳುನಾಡು ರಾಜ್ಯದ ಧಾರ್ಮಿಕ ಸಾಮರಸ್ಯವನ್ನು ಹಾಳು ಮಾಡಬಾರದು ಎಂದು ನಟ ರಜನಿಕಾಂತ್ ಅವರು ಮಂಗಳವಾರ ಹೇಳಿದ್ದಾರೆ. 
ವಿಶ್ವ ಹಿಂದೂ ಪರಿಷತ್'ನ ರಾಮ ರಾಜ್ಯ ರಥ ಯಾತ್ರೆ ತಮಿಳುನಾಡು ರಾಜ್ಯಕ್ಕೆ ತಲುಪಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದ ಜನರು ಜಾತ್ಯಾತೀತರು. ರಾಮ ರಾಜ್ಯ ರಥ ಯಾತ್ರೆಯಿಂದ ರಾಜ್ಯದಲ್ಲಿ ಕೋಮು ಗಲಭೆಗಳು ಸೃಷ್ಟಿಯಾಗದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕೆಂದು ಹೇಳಿದ್ದಾರೆ. 
ಇದೇ ವೇಳೆ ಪುದುಕೊಟ್ಟೈ ಜಿಲ್ಲೆಯಲ್ಲಿ ಪಿರಿಯಾರ್ ಅವರ ಪ್ರತಿಮೆಯನ್ನು ಧ್ವಂಸ ಗೊಳಿಸಿರುವ ಪ್ರಕರಣವನ್ನು ರಜನಿಕಾಂತ್ ಅವರು ತೀವ್ರವಾಗಿ ಖಂಡಿಸಿದ್ದಾರೆ. 
ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ರಾಜ್ಯ ಸರ್ಕಾರ ಯಾವುದೇ ರೀತಿಯ ಗಂಭೀರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಸಾಧ್ಯವಾದಷ್ಟು ಶೀಘ್ರದಲ್ಲಿಯೇ ಮಂಡನೆ ರಚನೆಯಾಗಬೇಕಿದೆ ಎಂದು ತಿಳಿಸಿದ್ದಾರೆ. 
ಬಿಜೆಪಿ ನನ್ನ ಹಿಂದೆ ಇಲ್ಲ. ದೇವರು ಹಾಗೂ ರಾಜ್ಯದ ಜನತೆ ನನ್ನ ಹಿಂದೆ ಇದ್ದಾರೆಂದಿದ್ದಾರೆ. 
ಇದೇ ವೇಳೆ ಏ.1 ರಂದು ರಜನಿಕಾಂತ್ ಅವರು ಪಕ್ಷವನ್ನು ಘೋಷಣೆ ಮಾಡಲಿದ್ದಾರೆಂಬ ವರದಿಗಳನ್ನು ತಿರಸ್ಕರಿಸಿರುವ ಅವರು, ಪಕ್ಷದ ಕಚೇರಿಯ ಪದಾಧಿಕಾರಿಗಳ ಪಟ್ಟಿಯನ್ನು ನಾವು ಈಗಾಗಲೇ ಬಿಡುಗಡೆ ಮಾಡಿದ್ದು, ಕೇವಲ 13 ಜಿಲ್ಲೆಗಳ ಪಟ್ಟಿಯನ್ನಷ್ಟೇ ಬಿಡುಗಡೆ ಮಾಡಿದ್ದೇವೆ. ಮಾಧ್ಯಮಗಳ ವರದಿಯಲ್ಲಿ ದೋಷವಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್