ಶರದ್ ಯಾದವ್ 
ದೇಶ

ಅಖಿಲೇಶ್ ಭೇಟಿ ಮಾಡಿದ ಶರದ್ ಯಾದವ್, ಮಹಾಮೈತ್ರಿ ಕುರಿತು ಚರ್ಚೆ

ಉತ್ತರ ಪ್ರದೇಶ ರಾಜಧಾನಿ ಲಖನೌನಲ್ಲಿ ಮಂಗಳವಾರ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ....

ಲಖನೌ: ಉತ್ತರ ಪ್ರದೇಶ ರಾಜಧಾನಿ ಲಖನೌನಲ್ಲಿ ಮಂಗಳವಾರ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಒಂದು ಕಡೆ ರಾಜ್ಯಸಭೆ ಚುನಾವಣೆ ಗೆಲ್ಲಲ್ಲು ಬಿಜೆಪಿ ಎಸ್ಪಿ ರಣತಂತ್ರ ರೂಪಿಸುತ್ತಿದ್ದರೆ, ಮತ್ತೊಂದು ಕಡೆ ಜೆಡಿಯು ಮಾಜಿ ಮುಖ್ಯಸ್ಥ ಶರದ್ ಯಾದವ್ ಅವರು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮಹಾಮೈತ್ರಿ ರಚನೆ ಮಾಡುವ ಕುರಿತು ಶರದ್ ಯಾದವ್ ಅವರು ಅಖಿಲೇಶ್ ಜೊತೆ ಚರ್ಚಿಸಿದ್ದಾರೆ.
ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರುದ್ಧ ಸಮಾನ ಮನಸ್ಕ ಪಕ್ಷಗಳನ್ನು ಒಳಗೊಂಡ ಮಹಾಮೈತ್ರಿ ರಚನೆ ಕುರಿತು ಇಬ್ಬರು ನಾಯಕರು ಸಮಾಲೋಚನೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಅಖಿಲೇಶ್ ಭೇಟಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಶರದ್ ಯಾದವ್ ಅವರು, 2014ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ದೇಶದ ಜನತೆಗೆ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದಿದ್ದಾರೆ.
ಮೋದಿ ಸರ್ಕಾರದ ರೈತ ವಿರೋಧಿ ನೀತಿ ಮತ್ತು ನೋಟ್ ನಿಷೇಧದಿಂದಾಗಿ ದೇಶಾದ್ಯಂತ ಸುಮಾರು 26 ಸಾವಿರ ರೈತರು ಮತ್ತು 500 ನಿರುದ್ಯೋಗಿ ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶರದ್ ಯಾದವ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT