ಜಮ್ಮು; ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ, ಭಾರತೀಯ ಸೇನಾ ಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಗುರುವಾರ ತಿಳಿದುಬಂದಿದೆ.
ಕುಪ್ವಾರ ಜಿಲ್ಲೆಯ ದಟ್ಟ ಅರಣ್ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಉಗ್ರರ ವಿರುದ್ಧ ಸೇನಾಪಡೆ ನಿನ್ನೆಯಷ್ಟೇ ಎನ್ ಕೌಂಟರ್ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿತ್ತು. ಉಗ್ರರು ಹಾಗೂ ಸೇನಾಪಡೆಗಳ ನಡುವೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಹಾಗೂ ಮೂವರು ಯೋಧರು ಹುತಾತ್ಮರಾಗಿದ್ದರು.
ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಸ್ಥಳದಲ್ಲಿ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಕುಪ್ವಾರ ಐಜಿಪಿ ಎಸ್'ಪಿ ಪಣಿ ಮಾತನಾಡಿ, ಸ್ಥಳದಲ್ಲಿ ಕಾರ್ಯಾಚಱಣೆ ಮುಂದುರೆದಿದ್ದು, ಉಗ್ರರ ಬಳಿಯಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನಿನ್ನೆ ನಡೆದ ಎನ್'ಕೌಂಟರ್ ನಲ್ಲಿ ಹತರಾದ ಉಗ್ರರು ವಿದೇಶಿ ಉಗ್ರರಾಗಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಶಂಕೆಗಳು ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics