ದೇಶ

ಸಂಸತ್ತಿನಲ್ಲಿ ಮುಂದುವರೆದ ಗದ್ದಲ; ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ

Manjula VN
ನವದೆಹಲಿ: ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷದ ಸದಸ್ಯರು ತೀವ್ರ ಗದ್ದಲ ಸೃಷ್ಟಿಸಿದ ಹಿನ್ನಲೆಯಲ್ಲಿ ರಾಜ್ಯಸಭೆ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ. 
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಟಿಡಿಪಿ, ವೈಎಸ್ಆರ್ ಕಾಂಗ್ರೆಸ್, ತೆಲಂಗಾಣ ರಾಷ್ಟ್ರ ಸಮಿತಿ, ಎಡಿಎಂಕೆ ಸದಸ್ಯರು ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಸೃಷ್ಟಿಸಿದ್ದಾರೆ. ಸದನದ ಬಾವಿಗಿಳಿದ ಟಿಡಿಪಿ ಸಂಸದರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ, ಅಲ್ಲದೆ, ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಿದ್ದಾರೆ.
ಈ ವೇಳೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅವರು ಹಲವು ಬಾರಿ ಮನವಿ ಮಾಡಿಕೊಂಡರು ಟಿಡಿಪಿ ಸಂಸದರು ತಮ್ಮ ಪಟ್ಟು ಸಡಿಲಿಸದ ಹಿನ್ನಲೆಯಲ್ಲಿ ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ. 
ಕಲಾಪ ಮುಂದೂಡಿರುವುದಕ್ಕೆ ತೀವ್ರವಾಗಿ ಕಿಡಿಕಾರಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಸಭಾಪತಿಗಳು ಸದನದ ಕಲಾಪವನ್ನು ಯಾವ ಕಾರಣಕ್ಕೆ ಮುಂದೂಡಿದರು ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ. 
SCROLL FOR NEXT