ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿಕ್ ಚಿದಂಬರಂಗೆ ಷರತ್ತುಬದ್ಧ ಜಾಮೀನು

Vishwanath S
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 
ದೆಹಲಿ ಹೈಕೋರ್ಟ್ ಕಾರ್ತಿಕ್ ಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು 10 ಲಕ್ಷ ಮೌಲ್ಯದ ಬಾಂಡ್ ನೀಡುವಂತೆ ಹಾಗೂ ದೇಶ ಬಿಟ್ಟು ತೆರಳದಂತೆ ಸೂಚನೆ ನೀಡಿದೆ. 
ಕಳೆದ ಫೆಬ್ರವರಿ 28ರಂದು ಲಂಡನ್ ನಿಂದ ವಾಪಸ್ ಆಗುತ್ತಿದ್ದರಂತೆ ಚೆನ್ನೈನ ವಿಮಾನ ನಿಲ್ದಾಣದಲ್ಲಿ  ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. 
ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಚಿದಂಬರಂ ಸಚಿವರಾಗಿದ್ದರು, ಈ ವೇಳೆ ಐಎನ್ಎಕ್ಸ್ ಮೀಡಿಯಾ ಸಂಸ್ಥೆ ಹಗರಣ ನಡೆದಿತ್ತು. ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಕಾರ್ತಿ ಚಿದಂಬರಂ ವಿರುದ್ಧ ಇಡಿ ಮೇ, 2017ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಕಾರ್ತಿ ಚಿದಂಬರಂ ನನ್ನು ಬಂಧಿಸಲಾಗಿತ್ತು.
SCROLL FOR NEXT