ಅಯೋಧ್ಯೆ ವಿವಾದ: ಏಪ್ರಿಲ್ 6ಕ್ಕೆ ವಿಚಾರಣೆ ಮುಂದೂಡಿದ 'ಸುಪ್ರೀಂ'
ವಿವಾದಿತ ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 6ಕ್ಕೆ ಮುಂದೂಡಿದೆ...
ನವದೆಹಲಿ: ವಿವಾದಿತ ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 6ಕ್ಕೆ ಮುಂದೂಡಿದೆ.
ಪ್ರಕರಣ ಸಂಬಂಧ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ 13 ಮೇಲ್ಮನವಿ ಅರ್ಜಿಗಳು ಸಲ್ಲಿಕೆಯಾಗಿದ್ದು ಇದರ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಒಳಪಡಿಸಲಿದೆ.
ವಿವಾದ ಸಂಬಂಧ ಈ ಹಿಂದೆ ಸಲ್ಲಿಕೆಯಾಗಿದ್ದ 32 ಮಧ್ಯಂತರ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ, ಶ್ಯಾಮ್ ಬೆನೆಗಲ್, ಅಪರ್ಣಾ ಸೇನ್ ಮತ್ತು ಟೀಸ್ತಾ ಸೆಟಲ್ವಾಡ್ ಸೇರಿದಂತೆ ಹಲವರು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠ ಎಲ್ಲಾ 32 ಮಧ್ಯಂತರ ಅರ್ಜಿ ವಜಾಗೊಳಿಸಿದ್ದು ಇದೇ ವೇಲೆ ಈ ಪ್ರಕರಣದಲ್ಲಿ ಯಾವುದೇ ಮಧ್ಯಂತರ ಅರ್ಜಿಗಳನ್ನು ಸಲ್ಲಿಸಬಾರದು ಎಂದು ನ್ಯಾಯಮೂರ್ತಿಗಳು ನಿರ್ದೇಶನ ನೀಡಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.