ಉತ್ತರ ಪ್ರದೇಶ : ಪ್ರತಾಪ್ ಘರ್ ಜಿಲ್ಲೆಯ ಜಗತ್ ಪುರ್ ಬಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಉಂಟಾಗಿ 8 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.