ಅಸ್ಸಾಂ : ಮುಂಬರುವ ಲೋಕಸಭಾ ಚುನಾವಣೆ ವೇಳೆ ಈಶಾನ್ಯ ರಾಜ್ಯಗಳಲ್ಲಿ 25 ಕ್ಷೇತ್ರಗಳ ಪೈಕಿ 21 ಸ್ಥಾನಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ ಎಂದು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಗುವಾಹಟಿಯಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಸಾಧನೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಒಟ್ಟಾರೇ 58 ರಾಜ್ಯಸಭಾ ಸ್ಥಾನಗಳಿಗೆ ನಡೆದ ದ್ವೈ ವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ 11 ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ಕಳೆದುಕೊಂಡಿದೆ. ಇದರಿಂದಾಗಿ ರಾಜ್ಯಸಭೆಯಲ್ಲಿ ಸಂಖ್ಯೆ ಕೊರತೆ ಎದುರಿಸುತ್ತಿದ್ದ ಬಿಜೆಪಿಗೆ ಈಗ ಆ ಭಯ ಇಲ್ಲದಂತಾಗಿದೆ .
245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಕಾಂಗ್ರೆಸ್ 54 ಸ್ಥಾನಗಳಿಂದ 50 ಸ್ಥಾನಗಳಿಗೆ ಕುಸಿತಗೊಂಡಿದೆ. ನೂತನ ಸಂಸದರು ಮುಂದಿನ ವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.