ಕೇಂದ್ರ ರೈಲ್ವೇ ಹಾಗೂ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ 
ದೇಶ

ರಾಜ್ಯಸಭಾ ಚುನಾವಣೆಗೆ ಎನ್'ಡಿಎ ಪಕ್ಷ ಒಗ್ಗಟ್ಟಿನಿಂದ ಸ್ಪರ್ಧಿಸಿತ್ತು; ಪಿಯೂಷ್ ಗೋಯಲ್

ರಾಜ್ಯಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಎನ್'ಡಿಎ ಪಕ್ಷಶ ಒಗ್ಗಟ್ಟಿನಿಂದ ಸ್ಪರ್ಧೆ ನಡೆಸಿತ್ತು ಎಂದು ಕೇಂದ್ರ ರೈಲ್ವೇ ಹಾಗೂ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ಅವರು ಶನಿವಾರ ಹೇಳಿದ್ದಾರೆ...

ಲಖನೌ: ರಾಜ್ಯಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಎನ್'ಡಿಎ ಪಕ್ಷಶ ಒಗ್ಗಟ್ಟಿನಿಂದ ಸ್ಪರ್ಧೆ ನಡೆಸಿತ್ತು ಎಂದು ಕೇಂದ್ರ ರೈಲ್ವೇ ಹಾಗೂ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ಅವರು ಶನಿವಾರ ಹೇಳಿದ್ದಾರೆ. 
ರಾಜ್ಯಸಭಾ ಚುನಾವಣೆಯ ಗೆಲವು ಹಿನ್ನಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಮೈತ್ರಿ ಪಕ್ಷಗಳಾದ ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭಾರ್ ಮತ್ತು ಅಪ್ನಾ ದಳ ಪಕ್ಷದ ಮುಖ್ಯಸ್ಥ ಅಟಿಕ್ ಅಹ್ಮದ್ ಅವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. 
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಹಾಗೂ ಕೇಶವ್ ಪ್ರಸಾದ್ ಮೌರ್ಯ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ನಮ್ಮ ಮಿತ್ರ ಪಕ್ಷಗಳು ಮತ್ತು ಪಕ್ಷದ ಶಾಕರರ ಬೆಂಬಲಕ್ಕೆ ಈ ಮೂಲಕ ಧನ್ಯವಾದಗಳನ್ನು ಹೇಳುತ್ತೇನೆ. ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಕ್ತಿಯನ್ನು ಹೆಚ್ಚಿಸಿದ ಸಚಿವರಿಗೂ ನಾನು ಧನ್ಯವಾದಗಳನ್ನು ಹೇಳುತ್ತೇನೆಂದು ತಿಳಿಸಿದ್ದಾರೆ. 
ಕೇಂದ್ರದಲ್ಲಿಯೂ ಕೂಡ ಬಿಜೆಪಿ ಬಹುಮತ ಪಡೆಯಲಿದೆ ಎಂಬ ವಿಶ್ವಾಸವಿದೆ. ಇದರಿಂದ ದೇಶದ ಜನತೆ ಸಹಾಯಕವಾಗುವ ಕಾನೂನುಗಳ ಜಾರಿ ಮತ್ತು ಕಾಂಗ್ರೆಸ್ ಸೋಲಿಸಲು ಸಹಾಯಕವಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!