ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ದೇಶ

ಎನ್'ಡಿಎ ಮೈತ್ರಿ ತೊರೆವ ಟಿಡಿಪಿ ನಿರ್ಧಾರ ದುರಾದೃಷ್ಟಕರ, ಏಕಪಕ್ಷೀಯ: ಸಿಎಂ ನಾಯ್ಡುಗೆ ಅಮಿತ್ ಶಾ ಬಹಿರಂಗ ಪತ್ರ

ಆಂಧ್ರಪ್ರದೇಶ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಎನ್'ಡಿಎ ಕೂಟದ ಜೊತೆಗಿನ ಮೈತ್ರಿ ತೊರೆಯುವ ತೆಲುಗು ದೇಶ ಪಕ್ಷ (ಟಿಡಿಪಿ)ದ ನಿರ್ಧಾರ ದುರಾದೃಷ್ಟಕರ ಮತ್ತು ಏಕಪಕ್ಷೀಯ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ...

ಹೈದರಾಬಾದ್; ಆಂಧ್ರಪ್ರದೇಶ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಎನ್'ಡಿಎ ಕೂಟದ ಜೊತೆಗಿನ ಮೈತ್ರಿ ತೊರೆಯುವ ತೆಲುಗು ದೇಶ ಪಕ್ಷ (ಟಿಡಿಪಿ)ದ ನಿರ್ಧಾರ ದುರಾದೃಷ್ಟಕರ ಮತ್ತು ಏಕಪಕ್ಷೀಯ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. 
ಈ ಕುರಿತಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಹಾಗೂ ಟಿಡಿಪಿ ಪಕ್ಷ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಬಹಿರಂಗ ಪತ್ರ ಬರೆದಿರುವ ಅಮಿತ್ ಶಾ ಅವರು, ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. 
ಎನ್'ಡಿಎ ತೊರೆಯುವ ಟಿಡಿಪಿ ನಿರ್ಧಾರವನ್ನು ಸಂಪೂರ್ಣವಾಗಿ ರಾಜಕೀಯ ಉದ್ದೇಶದಿಂದ ಕೈಗೊಳ್ಳಲಾಗಿದೆಯೇ ಹೊರತು ಅಭಿವೃದ್ಧಿ ಕುರಿತ ಕಳಕಳಿಯಿಂದಲ್ಲ ಎಂದು ಹೇಳಲು ಬಯಸುತ್ತೇನೆಂದು ಹೇಳಿದ್ದಾರೆ. ಅಲ್ಲದೆ, ಆಂಧ್ರಪ್ರದೇಶ ರಾಜ್ಯದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಧ್ಯವಿರುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆಂದು ಪತ್ರದಲ್ಲಿ ತಿಳಿಸಿದ್ದಾರೆ. 
ಕೇಂದ್ರ ಬಜೆಟ್ ನಲ್ಲಿ ಆಂಧ್ರಪ್ರದೇಶ ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ಈ ಹಿಂದೆ ಟಿಡಿಪಿ ಆರೋಪ ಮಾಡಿತ್ತು. ನಂತರ ಎನ್'ಡಿಎ ಪಕ್ಷದ ಜೊತೆಗಿನ ಟಿಡಿಪಿ ಸಂಬಂಧದಲ್ಲಿ ಒಡಕು ಮೂಡಿತ್ತು. ಇದರ ಬೆನ್ನಲ್ಲೇ ಕೇಂದ್ರದ ನಾಗರಿಕ ವಿಮಾನಯಾನ ಸಚಿವರಾದ ಟಿಡಿಪಿಯ ಅಶೋಕ್ ಗಜಪತಿ ರಾಜು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ವೈ.ಎಸ್.ಚೌಧರಿಯವರು ಸಚಿವ ಸಂಪುಟಕ್ಕೆ ರಾಜಿನಾಮೆ ನೀಡಿದ್ದರು. 
ಇದಾದ ಬಳಿಕ ಮಾರ್ಚ್.16 ರಂದು ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಮುಂದಾದ್ದ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದತೆಲುಗು ದೇಶಂ ಪಕ್ಷ ನಂತರ ಎನ್'ಡಿಎ ಒಕ್ಕೂಟದಿಂದ ಹೊರ ಬರಲು ನಿರ್ಧಾರ ಕೈಗೊಂಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ