ಅಸ್ಸಾಂ: ಅಸ್ಸಾಂನ ನಾಗಾನ್ ಜಿಲ್ಲೆಯಲ್ಲಿ 5ನೇ ತರಗತಿ ಬಾಲಕಿ ಮೇಲೆ ಆಕೆಯದ್ದೇ ತರಗತಿಯ ಇಬ್ಬರು ಬಾಲಕರು ಸೇರಿದಂತೆ ಮೂವರು ಅತ್ಯಾಚಾರ ಎಸಗಿ ಬಳಿಕ ಆಕೆಯನ್ನು ಬೆಂಕಿ ಹಚ್ಚಿ ಕೊಲೈಗೈದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತ ಬಾಲಕಿಯ ಮನೆಯಲ್ಲಿ ಒಬ್ಬಳೇ ಇದ್ದಾಗ ಮೂವರು ಆರೋಪಿಗಳು ಅತ್ಯಾಚಾರ ನಡೆಸಿ, ಅನಂತರ ಸೀಮೆ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿದ್ದಾರೆ.
ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಬಾಲಕಿಯ ಇಬ್ಬರು ಸಹಪಾಟಿಗಳನ್ನು ಬಂಧಿಸಿದ್ದು ಪರಾರಿಯಾಗಿರುವ ಝಾಕಿರ್ ಹುಸೇನ್ ಎಂಬಾತನಿಗಾಗಿ ಹುಡುಕಾಟ ನಡೆಸಿದ್ದಾರೆ.