ದೇಶ

ಮುಂದಿನ ವಾರ ಮೃತ 39 ಭಾರತೀಯರ ಕಳೆಬರಹ ಸ್ವದೇಶಕ್ಕೆ: ಸುಷ್ಮಾ ಸ್ವರಾಜ್

Vishwanath S
ನವದೆಹಲಿ: ಇರಾಕ್ ಮೊಸುಲ್ ನಲ್ಲಿ ಇಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿ ಹತ್ಯೆಗೀಡಾಗಿದ್ದ 39 ಭಾರತೀಯರ ಕಳೆಬರಹವನ್ನು ಮುಂದಿನ ವಾರ ಸ್ವದೇಶಕ್ಕೆ ತರಲಾಗುವುದು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮೃತರ ಕುಟುಂಬಕ್ಕೆ ಆಶ್ವಾಸನೆ ನೀಡಿದ್ದಾರೆ. 
ಮೃತನ ಕುಟುಂಬಸ್ಥರೊಬ್ಬರು ಮೃತದೇಹಗಳನ್ನು ಸ್ವದೇಶಕ್ಕೆ ತರಲು ಮನವಿ ಮಾಡಿದಕ್ಕೆ ಪೂರಕವಾಗಿ ಸ್ಪಂಧಿಸಿರುವ ಸರ್ಕಾರ ಮುಂದಿನ ವಾರ 39 ಭಾರತೀಯರ ಕಳೆಬರಹವನ್ನು ತರುವುದಾಗಿ ಭರವಸೆ ನೀಡಿದೆ ಎಂದು ದವೀಂದರ್ ಸಿಂಗ್ ಹೇಳಿದ್ದಾರೆ. 
39 ಮಂದಿ ಭಾರತೀಯರು ಟರ್ಕಿ ಮೂಲಕ ನಿರ್ಮಾಣ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇರಾಕ್ ನಲ್ಲಿ ಉಪಟಳ ಹೆಚ್ಚಿಕೊಂಡಿದ್ದ ಇಸಿಸ್ ಉಗ್ರರು, ವಿದೇಶಿ ಪ್ರಜೆಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದರು. ವಿವಿಧ ರಾಷ್ಟ್ರಗಳ ಪ್ರಜೆಗಳನ್ನು ಬೇರೆ ಬೇರೆ ನೆಲೆಗಳಲ್ಲಿ ಅಡಗಿಸಿಟ್ಟಿದ್ದರು. ಭಾರತೀಯರ ಜೊತೆಗೆ 51 ಬಾಂಗ್ಲಾದೇಶಿ ಕಾರ್ಮಿಕರನ್ನು ಒತ್ತೆಯಾಗಿರಿಸಿಕೊಂಡಿದ್ದರು. 
ಇರಾಕ್ ನಲ್ಲಿ 3 ವರ್ಷಗಳ ಹಿಂದೆ ಅಪಹರಣಕ್ಕೊಳಗಾಗಿದ್ದ 39 ಭಾರತೀಯರು ಹತ್ಯೆಗೀಡಾಗಿದ್ದಾರೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ದೃಢಪಡಿಸಿದ್ದರು. ರಾಜ್ಯಸಭೆಯಲ್ಲಿ ಮಾತನಾಡಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಅಪಹರಣಕ್ಕೊಳಗಾಗಿದ್ದ 39 ಭಾರತೀಯರನ್ನು ವರ್ಷಗಳ ಹಿಂದೆಯೇ ಇಸಿಸ್ ಉಗ್ರರು ಹತ್ಯೆ ಮಾಡಿದ್ದು, ಸಾಮೂಹಿಕ ಸಮಾಧಿ ಮಾಡಿದ್ದಾರೆ. ಡಿಎನ್ಎ ಪರೀಕ್ಷೆ ಮೂಲಕ ಹತ್ಯೆಗೀಡಾಗಿದ್ದ ಭಾರತೀಯರನ್ನು ಗುರ್ತಿಸಲಾಗಿದೆ ಎಂದು ಹೇಳಿದ್ದರು.
SCROLL FOR NEXT