ತೆಲಂಗಾಣ: ಬಾವಿಗೆ ಬಿದ್ದ ಆಟೋ 11 ಮಂದಿ ದುರ್ಮರಣ
ಏಳು ಸೀಟಿನ ಆಟೋವೊಂದು ಬಾವಿಗೆ ಬಿದ್ದ ಪರಿಣಾಮ 11 ಮಂದಿ ದಾರುಣ ಸಾವನ್ನಪ್ಪಿದ್ದಾರೆ...
ನಿಜಾಮಬಾದ್(ತೆಲಂಗಾಣ): ಏಳು ಸೀಟಿನ ಆಟೋವೊಂದು ಬಾವಿಗೆ ಬಿದ್ದ ಪರಿಣಾಮ 11 ಮಂದಿ ದಾರುಣ ಸಾವನ್ನಪ್ಪಿದ್ದಾರೆ.
ತೆಲಂಗಾಣದ ನಿಜಾಮಾಬಾದ್ ನ ಮುಪ್ಕಾಲ್ ಗ್ರಾಮದಲ್ಲಿ ಆಟೋದಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ನಾಲ್ವರು ಮಹಿಳೆಯರು ಹಾಗೂ ಆರು ಮಕ್ಕಳು ಸೇರಿದಂತೆ 11 ಮಂದಿ ಜಲಸಮಾಧಿಯಾಗಿದ್ದಾರೆ. ಇನ್ನು ಉಳಿದವರು ಈಜಿ ಮೇಲೆ ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಸಂತಾಪ ಸೂಚಿಸಿದ್ದಾರೆ. ಇನ್ನು ಅಪಘಾತಕ್ಕೆ ಮಿತಿ ಮೀರಿ ಜನರನ್ನು ತುಂಬಿಸಿಕೊಂಡಿದ್ದೆ ಕಾರಣ ಎಂದು ಹೇಳಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.