ಚುನಾವಣಾ ಆಯೋಗ 
ದೇಶ

ಅಧಿಕೃತ ಪ್ರಕಟಣೆಗೂ ಮುನ್ನವೇ ದಿನಾಂಕ ಸೋರಿಕೆ: ತನಿಖೆಗಾಗಿ ಆಯೋಗದಿಂದ ಸಮಿತಿ ರಚನೆ

ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಅಧಿಕೃತವಾಗಿ ಪ್ರಕಟವಾಗುವುದಕ್ಕೂ ಮುನ್ನವೇ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿರುವುದರ ಬಗ್ಗೆ ತನಿಖೆ ನಡೆಸಲು ಚುನಾವಣಾ

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಅಧಿಕೃತವಾಗಿ ಪ್ರಕಟವಾಗುವುದಕ್ಕೂ ಮುನ್ನವೇ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿರುವುದರ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗ ಸಮಿತಿ ರಚನೆ ಮಾಡಿದೆ. 
ಅಧಿಕೃತ ಪ್ರಕಟಣೆಗೂ ಮುನ್ನವೇ ದಿನಾಂಕ ಸೋರಿಕೆಯಾಗಿರುವುದರ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸಮಿತಿಗೆ ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವುದಕ್ಕೂ ಸಲಹೆ ನೀಡುವಂತೆ ಸೂಚನೆ ನೀಡಲಾಗಿದೆ. 
ಚುನಾವಣಾ ಆಯೋಗ ದಿನಾಂಕ ಪ್ರಕಟಿಸುವುದಕ್ಕೂ ಮುನ್ನ ಬಿಜೆಪಿ ಐಟಿ ಸೆಲ್ ನ ಮುಖ್ಯಸ್ಥ ಹಾಗೂ ರಾಜ್ಯ ಕಾಂಗ್ರೆಸ್ ಐಟಿ ಸೆಲ್ ಉಸ್ತುವಾರಿ ಚುನಾವಣಾ ದಿನಾಂಕವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದರು. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್