ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಿವಸೇನೆ, ಟಿಆರ್ ಎಸ್ ಸಂಸದರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮಾ.27 ರಂದು ಸಂಸತ್ ನಲ್ಲಿ ಶಿವಸೇನೆ ಸಂಸದ ಸಂಜಯ್ ರಾವುತ್, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ಟಿಆರ್ ಎಸ್ ಸಂಸದೆ ಕೆ.ಕವಿತ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಲೋಕಸಭೆಯಲ್ಲಿ ಟಿಡಿಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ವಿಪಕ್ಷಗಳ ಸಂಸದರನ್ನು ಭೇಟಿ ಮಾಡಿದ್ದಾರೆ.
2019 ರ ಲೋಕಸಭಾ ಚುನಾವಣೆಗೆ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಲು ಕಾರ್ಯನಿರ್ವಹಿಸುತ್ತಿರುವ ರಾಜಕೀಯ ನಾಯಕರ ಪೈಕಿ ಮಮತಾ ಬ್ಯಾನರ್ಜಿಯೂ ಗುರುತಿಸಿಕೊಂಡಿದ್ದಾರೆ.