ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿ ಭಾಷಣ 
ದೇಶ

ಪ್ರಧಾನಿ ನರೇಂದ್ರಮೋದಿ ಭಾಷಣಕ್ಕೆ ರಾಜ್ಯಸಭೆಯಲ್ಲಿ ಅಡ್ಡಿ

ರಾಜ್ಯಸಭೆಯಲ್ಲಿಂದು ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರಮೋದಿ ಎದ್ದುನಿಂತಾಗ ಪ್ರತಿಪಕ್ಷಗಳಿಂದ ತೀವ್ರ ಅಡ್ಡಿ ಉಂಟಾಯಿತು.

ನವದೆಹಲಿ : ರಾಜ್ಯಸಭೆಯಲ್ಲಿಂದು ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರಮೋದಿ ಎದ್ದುನಿಂತಾಗ  ಪ್ರತಿಪಕ್ಷಗಳಿಂದ ತೀವ್ರ ಅಡ್ಡಿ ಉಂಟಾಯಿತು.

ತ್ರಿವಳಿ ತಲಾಕ್ ನಿಷೇಧ ಸೇರಿದಂತೆ ಹಲವು ಮಹತ್ವದ ಬಿಲ್ ಗಳು ಕಾನೂನಿನ ಮಾನ್ಯತೆ ನೀಡಲು ಚರ್ಚೆ ನಡೆಯಬೇಕಾಗಿದೆ ಆದರೆ, ಪ್ರತಿಪಕ್ಷಗಳು ಇದರಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ನರೇಂದ್ರಮೋದಿ ಅಸಮಾಧಾನ ವ್ಯಕ್ತಪಡಿಸಿದರು.

 ಪ್ರತಿಪಕ್ಷಗಳ ಅಡ್ಡಿಯ ನಡುವೆಯೂ ಮಾತು ಮುಂದುವರೆಸಿದ ಪ್ರಧಾನಿ ತ್ರಿವಳಿ ತಲಾಕ್ ಚರ್ಚೆಯ ಸಂದರ್ಭದಲ್ಲಿ ನಿವೃತ್ತರಾಗುತ್ತಿರುವ ಸದಸ್ಯರು ಸಂಸತ್ತಿನ ಭಾಗವಾಗದಿರುವುದು   ದುರದೃಷ್ಟಕರ ಎಂದರು.

ಹೊರಹೊಗುತ್ತಿರುವ ಸದಸ್ಯರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಿ ಸುಗಮ ಕಲಾಪಕ್ಕೆ ಪ್ರತಿಪಕ್ಷಗಳು ಮಾತ್ರವಲ್ಲದೇ ಸರ್ಕಾರದ ಜವಾಬ್ದಾರಿಯೂ ಹೆಚ್ಚಿದೆ ಎಂದರು.

ಭಾರತದ ಪ್ರಜಾಪ್ರಭುತ್ವದಲ್ಲಿ ರಾಜ್ಯಸಭೆಯ ಪಾತ್ರ ಮಹತ್ವದಾಗಿದ್ದು, ಅನೇಕ ದಿಗ್ಗಜ ಸದಸ್ಯರು ಸೇವೆ ಸಲ್ಲಿಸಿದ್ದಾರೆ ಎಂದು ಗುಣಗಾನ ಮಾಡಿದ್ದರು. ಆದರೆ, ಪ್ರಧಾನಿ ಭಾಷಣಕ್ಕೆ ಪ್ರತಿಪಕ್ಷಗಳ ಸದಸ್ಯರು ಅಡ್ಡಿಪಡಿಸುತ್ತಲೇ ಇದ್ದರು.






Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!