ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯಲ್ಲಿ ಬುಧವಾರ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಭದ್ರತಾ ಸಿಬ್ಬಂದಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಶಸ್ತ್ರ ಸಜ್ಜಿತ ಉಗ್ರರು 6 ಜಾಟ್ ರೆಜಿಮೆಂಟ್ ನ ರಾಜ್ ರೈಫಲ್ಸ್ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ನಡೆದ ಗುಂಡಿನ ಕಾಳಗಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಉಗ್ರರಿಂದ ಎಕೆ ರೈಫಲ್ಸ್, ಮ್ಯಾಗ್ಝಿನ್, ಹ್ಯಾಂಡ್ ಗ್ರೆನೇಡ್ ಮತ್ತು ಸುಧಾರಿಕ ಸ್ಫೋಟಕಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಂಕಿತ ಉಗ್ರರಿಗಾಗಿ ಇನ್ನು ಕಾರ್ಯಾಚರಣೆ ಮುಂದುವರೆದಿದ್ದು, ಚೆಕ್ ಪೋಸ್ಟ್ ಗಳಲ್ಲಿ ಬಿಎಸ್ ಎಫ್ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.