ನೈಸರ್ಗಿಕ ಅನಿಲದ ಬೆಲೆಯಲ್ಲಿ ಶೇ.6ರಷ್ಟು ಹೆಚ್ಚಳ, 
ದೇಶ

ನೈಸರ್ಗಿಕ ಅನಿಲದ ಬೆಲೆಯಲ್ಲಿ ಶೇ.6ರಷ್ಟು ಹೆಚ್ಚಳ, ಎರಡು ವರ್ಷಗಳ ಅತ್ಯಧಿಕ ಮಟ್ಟ ತಲುಪಿದ ದರ

ನೈಸರ್ಗಿಕ ಅನಿಲದ ಬೆಲೆಯನ್ನು ಶೇ 6 ರಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.

ನವದೆಹಲಿ: ನೈಸರ್ಗಿಕ ಅನಿಲದ ಬೆಲೆಯನ್ನು ಶೇ 6 ರಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಇದರಿಂದಾಗಿ ಅನಿಲದ ಬೆಲೆ ಎರಡು ವರ್ಷದ ಗರಿಷ್ಠ ಮಟ್ಟಕ್ಕೆ ತಲುಪಲಿದೆ. ಅಲ್ಲದೆ ಸಿಎನ್ ಜಿ ಹಾಗೂ ಅಡುಗೆ ಅನಿಲದ ಬೆಲೆಗಳು ಹೆಚ್ಚಾಗಲಿದೆ.
ಸ್ಥಳೀಯವಾಗಿ ಉತ್ಪಾದಿಸಲಾದ ನೈಸರ್ಗಿಕ ಅನಿಲದ ಬೆಲೆ ಕಳೆದ ಆರು ತಿಂಗಳಿನಿಂದ ಮಿಲಿಯನ್ ಬ್ರಿಟಿಷ್ ಥರ್ಮಲ್ ಯುನಿಟ್ ಒಂದಕ್ಕೆ 3.06 ಅಮೆರಿಕನ್ ಡಾಲರ್ ಆಗಿತ್ತು. ಆದರೆ ಬರುವ  ಏಪ್ರಿಲ್ 1 ರಿಂದ 2.89 ಅಮೆರಿಕನ್ ಡಾಲರ್ ನಷ್ಟು ಹೆಚ್ಚಳವಾಗಲಿದೆ ಎಂದು ತೈಲ ಸಚಿವಾಲಯದ ಹೇಳಿಕೆ ತಿಳಿಸಿದೆ.
ಅನಿಲ ಪೂರೈಕೆ ರಾಷ್ಟ್ರಗಳಾದ ಅಮೆರಿಕಾ, ರಷ್ಯಾ, ಕೆನಡಾದಲ್ಲಿನ ಅನಿಲ ದರಗಳನ್ನು ಆಧರಿಸಿ ನೈಸರ್ಗಿಕ ಅನಿಲ ಬೆಲೆಗಳು ಪ್ರತಿ ಆರು ತಿಂಗಳಿಗೊಮ್ಮೆ ಬದಲಾಗುತ್ತದೆ. ಭಾರತವು ತನ್ನ ಅಗತ್ಯಕ್ಕೆ ಬೇಕಾದ ಅನಿಲದಲ್ಲಿ ಅರ್ಧದಷ್ಟು ಅನಿಲವನ್ನು ವಿದೇಶದಿಂದ ಆಮದು ಮಾಡಿಕೊಳ್ಳುತ್ತಿದೆ. ಹೀಗೆ ಆಮದಾಗುವ ಅನಿಲಕ್ಕೆ ದೇಶೀಯ ದರಕ್ಕಿಂತ ಎರಡು ಪಟ್ಟು ಹೆಚ್ಚು.ಬೆಲೆ ನಿಡಬೇಕಿದೆ.
ಏಪ್ರಿಲ್-ಸೆಪ್ಟೆಂಬರ್ 2016ರ ಅವಧಿಯಲ್ಲಿ ಇದೇ ರೀತಿಯ ಬೆಲೆ ಏರಿಕೆಯ ಮೊತ್ತವನ್ನು ದೇಶೀ ಉತ್ಪಾದಕರಿಗೆ ಪಾವತಿಸಲಾಗಿತ್ತು, ಅಲ್ಲಿಂದೀಚೆಗೆ ಇದು  ಎರಡನೇ ನೇರ ದರ ಏರಿಕೆಯಾಗಿದೆ. ಬೆಲೆ ಏರಿಕೆಯಿಂದ ಆಯಿಲ್ ಆಂಡ್ ನ್ಯಾಚುರಲ್ ಗ್ಯಾಸ್ ಕಾರ್ಪ್(ಒಎನ್ಜಿಸಿ) ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ನಂತಹಾ ಉತ್ಪಾದಕರ ಆದಾಯವನ್ನು ಹೆಚ್ಚಿಸುತ್ತದೆ. ಆದರೆ ಸಿಎನ್ ಜಿ, ಅಡಿಗೆ ಅನಿಲಗಳ ಬೆಲೆ ಏರಿಕೆಗೆ ಸಹ ಇದು ಕಾರಣವಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT