ಶ್ರೀನಗರ: ಉಗ್ರನೋರ್ವ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿನ ವಿಶೇಷ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿದ ಗುಂಡಿನ ದಾಳಿ ನಡೆಸಿದ್ದು ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ.
ಹುತಾತ್ಮ ವಿಶೇಷ ಪೊಲೀಸ್ ಅಧಿಕಾರಿಯನ್ನು ಮುಷ್ತಕ್ ಅಹಮದ್ ಎಂದು ತಿಳಿದುಬಂದಿದೆ. ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಮುಷ್ತಕ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಗುಂಡಿನ ದಾಳಿಯಲ್ಲಿ ಮುಷ್ತಕ್ ಅವರ ಪತ್ನಿಗೂ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.