ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ: ದೆಹಲಿ ಪೊಲೀಸರಿಂದ 30 ಮಂದಿಯ ವಿಚಾರಣೆ, ಮುಂದುವರೆದ ಪ್ರತಿಭಟನೆ
ನವದೆಹಲಿ: ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 30 ಮಂದಿಯ ವಿಚಾರಣೆ ನಡೆಸಿದ್ದಾರೆ.
ಮಾ.30 ರಂದು ಪೊಲೀಸರು 30 ಮಂದಿಯ ವಿಚಾರಣೆ ನಡೆಸಿದ್ದು, ವಿಚಾರಣೆಗೊಳಗಾದ ವ್ಯಕ್ತಿಗಳಿಂದ 12 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೂ ಮುನ್ನ ದೆಹಲಿ ಪೊಲೀಸರು ಖಾಸಗಿ ಕೋಚಿಂಗ್ ಕೇಂದ್ರದ ಪ್ರಾಧ್ಯಾಪಕರೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
12 ನೇ ತರಗತಿಯ ಅರ್ಥಶಾಸ್ತ್ರ ಹಾಗೂ 10 ನೇ ತರಗತಿಯ ಗಣಿತಶಾಸ್ತ್ರದ ವಿಷಯದ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಎಸ್ಇ ಈ ಪ್ರಾಧ್ಯಾಪಕರ ವಿರುದ್ಧ ಆರೋಪ ಮಾಡಿತ್ತು.
ಇತ್ತ ಸಿಬಿಎಸ್ಇ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್ ನಿವಾಸದ ಬಳಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.