ಸುಪ್ರೀಂ 
ದೇಶ

ಎಸ್ ಸಿ/ ಎಸ್ ಟಿ ಕಾಯ್ದೆ ತೀರ್ಪು ಮರುಪರಿಶೀಲನೆ ಕೋರಿ ಸುಪ್ರೀಂ ಗೆ ಕೇಂದ್ರದಿಂದ ಅರ್ಜಿ

ಪರಿಶಿಷ್ಠ ಜಾತಿ/ ಪಂಗಡ (ಎಸ್ ಸಿ/ಎಸ್ ಟಿ) ಕಾಯ್ದೆಯ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ...

ನವದೆಹಲಿ: ಪರಿಶಿಷ್ಠ ಜಾತಿ/ ಪಂಗಡ (ಎಸ್ ಸಿ/ಎಸ್ ಟಿ) ಕಾಯ್ದೆಯ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ಸಚಿವ ಥಾವರ್ಚಂದ್ ಗೆಹ್ಲೋಟ್ ತಿಳಿಸಿದ್ದಾರೆ. 
ಸರ್ಕಾರ ಮರುಪರಿಶೀಲನೆ ಅರ್ಜಿ ಸಲ್ಲಿಸುವುದರ ಸಂಬಂಧ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ಎಸ್ ಸಿ/ಎಸ್ ಟಿ ಸಮುದಾಯಗಳ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ, ಅಟ್ರಾಸಿಟಿ ಕಾಯ್ದೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಘಟನೆಗಳು ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಅಗ್ರಹಿಸಿದ್ದಾರೆ. 
ಎಸ್ ಸಿ/ ಎಸ್ ಟಿ ಅಟ್ರಾಸಿಟಿ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದನ್ನು ತಡೆಗಟ್ಟಲು, ಆರೋಪಗಳು ಸುಳ್ಳಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ಪ್ರಾಥಮಿಕವಾಗಿ ಡಿಎಸ್ ಪಿ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಅಷ್ಟೇ ಅಲ್ಲದೇ ಕೇವಲ ಆರೋಪ ಕೇಳಿಬಂದ ಬೆನ್ನಲ್ಲೆ ಸರ್ಕಾರಿ ಅಧಿಕಾರಿಯ ವಿರುದ್ಧ ನೇಮಕಾತಿ ಅಧಿಕಾರಿಯ ಅನುಮತಿ ಇಲ್ಲದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ