ಜಮ್ಮು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಚೌರಿ ಮತ್ತು ಪೂಂಚ್ ಸೆಕ್ಟರ್ ಬಳಿ ಪಾಕಿಸ್ತಾನಿ ಸೈನಿಕರು ಅಪ್ರಚೋದಿನ ಗುಂಡಿನ ದಾಳಿ ನಡೆಸಿದ್ದಾರೆ.
ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧರೊಬ್ಬರು ಗಾಯಗೊಂಡಿದ್ದಾರೆ. ಪಾಕ್ ಗುಂಡಿನ ದಾಳಿಗೆ ಭಾರತೀಯ ಸೇನೆ ಯೋಧರು ಸಹ ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ.
ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.