ಸಂಗ್ರಹ ಚಿತ್ರ 
ದೇಶ

ಕಾವೇರಿ ಮಂಡಳಿ ಇಲ್ಲ: ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಗೆ ತಮಿಳುನಾಡು ಚಿಂತನೆ

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ 6 ವಾರಗಳ ಗಡುವಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು...

ಚೆನ್ನೈ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ 6 ವಾರಗಳ ಗಡುವಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 
ಕರ್ನಾಟಕ ರಾಜ್ಯವು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಸಂಬಂಧ ಯೋಜನೆ ರೂಪಿಸಬೇಕು ಎಂಬ ಸುಪ್ರೀಂಕೋರ್ಟ್ ಗಡುವು ಮಾ.29ಕ್ಕೆ ಮುಗಿದಿದೆ. ಆದರೂ ಕಾವೇರಿ ನಿರ್ವಹಣ ಮಂಡಳಿ ರಚನೆ ಕುರಿತಂತೆ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿಲ್ಲ. ಹೀಗಾಗಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಮಂತ್ರಿಮಂಡಲದ ಸದಸ್ಯರು ಮುಂದಿನ ಹಂತದ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದು, ಚರ್ಚೆ ಕುರಿತಂತೆ ಈವರೆಗೂ ನಿರ್ಧಾರವನ್ನು ಪ್ರಕಟಿಸಿಲ್ಲ. 
ಇದೇ ವೇಳೆ ಇತ್ತೀಚೆಗಷ್ಟೇ ರಾಜಕೀಯಕ್ಕೆ ಧುಮುಕಿರುವ ನಟರಾದ ಕಮಲ್ ಹಾಸನ್ ಹಾಗೂ ರಜನಿಕಾಂತ್ ಅವರು, ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೋಟ್ ಚೋರಿ’ ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

EC ಬಿಕ್ಕಟ್ಟು: ಜ್ಞಾನೇಶ್ ಕುಮಾರ್ ವಿರುದ್ಧ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು; ವಿಫಲವಾದರೆ ಸೇನೆ ಮಧ್ಯಪ್ರವೇಶಿಸಲಿ-Sanjay Raut

ಮೀರಾಬಾಯಿ ಚಾನುಗೆ ಬೆಳ್ಳಿ: 98ರ ಬಳಿಕ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ವೇಟ್‌ಲಿಫ್ಟಿಂಗ್‌ನಲ್ಲಿ ಮೊದಲ ಪದಕ!

Asian Games 2026: ಭಾರತಕ್ಕೆ ಶೂಟಿಂಗ್‌ನಿಂದ ಮತ್ತೊಂದು ಪದಕ; ಪುರುಷರ ಸ್ಕೀಟ್ ತಂಡಕ್ಕೆ ಕಂಚು