ಡಿ. ಜಯಕುಮಾರ್ 
ದೇಶ

ಕಾವೇರಿ ವಿವಾದ: ಸುಪ್ರೀಂ ಕೋರ್ಟಿಗೆ ತಮಿಳುನಾಡು ಸರ್ಕಾರದಿಂದ ಮೇಲ್ಮನವಿ- ಡಿ ಜಯಕುಮಾರ್

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಮಿಳುನಾಡು ಮೀನುಗಾರಿಕೆ ಸಚಿವ ಡಿ. ಜಯಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಚೆನ್ನೈ :  ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ  ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಮಿಳುನಾಡು ಮೀನುಗಾರಿಕೆ ಸಚಿವ ಡಿ. ಜಯಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಯಾವ ರೀತಿಯ ಮೇಲ್ಮನವಿ ಸಲ್ಲಿಸಲಾಗುವುದು ಎಂಬ ಬಗ್ಗೆ ಸ್ಪಷ್ಪಪಡಿಸದ ಜಯಕುಮಾರ್, ಈ ವಿವಾದ ಕುರಿತಂತೆ ಸರ್ಕಾರ ಚರ್ಚೆ ನಡೆಸಿದ್ದು, ಸುಪ್ರೀಂಕೋರ್ಟಿನಲ್ಲಿ ಒತ್ತಾಯಪಡಿಸಲಾಗುವುದು . ಆದರೆ. ಮೇಲ್ಮನವಿ ಸ್ವರೂಪ ಹೇಳಲಿಕೆ ಆಗುವುದಿಲ್ಲ ಎಂದರು.

 ಈ ಸಂಬಂಧ ಮುಂದೆ ಕೈಗೊಳ್ಳಬಹುದಾದ ಕಾನೂನು ಕ್ರಮಕ್ಕಾಗಿ ಮುಖ್ಯಮಂತ್ರಿ ಇ. ಕೆ. ಪಳನಿಸ್ವಾಮಿ ಅಧ್ಯಕ್ಷತೆಯಲ್ಲಿ ನಿನ್ನೆ ಸಭೆ ನಡೆಸಲಾಗಿದೆ.  ಆರು ವಾರಗಳಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಕೇಂದ್ರಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ  ರಚಿಸಬೇಕೆಂದು ತಮಿಳುನಾಡಿನ ಬೇಡಿಕೆಯಾಗಿದೆ ಎಂದು ಅವರು ಸ್ಪಷ್ಪಪಡಿಸಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!