ದೇಶ

ಉತ್ತರ ಪ್ರದೇಶದಲ್ಲಿ ಮತ್ತೊಂದು ಅಂಬೇಡ್ಕರ್ ಪ್ರತಿಮೆ ಧ್ವಂಸ, ಪರಿಸ್ಥಿತಿ ಉದ್ವಿಗ್ನ

Lingaraj Badiger
ಸಿದ್ದಾರ್ಥ್ ನಗರ: ಉತ್ತರ ಪ್ರದೇಶದಲ್ಲಿ ಒಂದೇ ದಿನ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಎರಡು ಪ್ರತಿಮೆಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು, ಅಲಹಬಾದ್ ಮತ್ತು ಸಿದ್ಧಾರ್ಥ್ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲಹಬಾದ್ ನಂತರ ಸಿದ್ಧಾರ್ಥ್ ನಗರದ ಗೋಹಿನಿಯಾ ಗ್ರಾಮದಲ್ಲಿದ್ದ ಅಂಬೇಡ್ಕರ್ ಪ್ರತಿಮೆಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದು, ಕೃತ್ಯವನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಪ್ರತಿಮೆ ಧ್ವಂಸಗೊಳಿಸಿರುವುದು ಪತ್ತೆಯಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಪ್ರತಿಭಟನೆ ನಡೆಸುತ್ತಿದ್ದಾರೆ. 
ಧ್ವಂಸಗೊಂಡ ಪ್ರತಿಮೆಯನ್ನು ಸ್ಥಳಾಂತರಿಸಲಾಗಿದ್ದು, ಈ ಸಂಬಂಧ ಅಪರಿಚಿತರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಧರ್ಮವೀರ್ ಅವರು ತಿಳಿಸಿದ್ದಾರೆ.
ಇದಕ್ಕು ಮುನ್ನ ಅಲಹಬಾದ್ ನ ತ್ರಿವೇಣಿಪುರಂ ನಲ್ಲಿರುವ ಪಾರ್ಕ್ ವೊಂದರಲ್ಲಿದ್ದ ಅಂಬೇಡ್ಕರ್ ಪ್ರತಿಮೆಯ ತಲೆ ಭಾಗವನ್ನು ತುಂಡರಿಸಲಾಗಿತ್ತು. ಪ್ರಕರಣ ನಮ್ಮ ಗಮನಕ್ಕೆ ಬಂದಿದ್ದು,  ಶೀಘ್ರವೇ ಆರೋಪಿಗಳನ್ನು ಬಂದಿಸಿವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
SCROLL FOR NEXT