ದೇಶ

ಕಾವೇರಿ ವಿವಾದ: ಸುಪ್ರಿಂ'ಗೆ ಸ್ಪಷ್ಟೀಕರಣ ಅರ್ಜಿ ಸಲ್ಲಿಸಿದ ಕೇಂದ್ರ, 3 ತಿಂಗಳ ಕಾಲಾವಕಾಶಕ್ಕೆ ಮನವಿ

Manjula VN
ನವದೆಹಲಿ; ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್'ನಲ್ಲಿ ಸ್ಪಷ್ಟೀಕರಣ ಅರ್ಜಿಯೊಂದನ್ನು ಸಲ್ಲಿಸಿದ್ದು, 3 ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ ಎಂದು ಶನಿವಾರ ತಿಳಿದುಬಂದಿದೆ. 
ಕಾವೇರಿ ವಿವಾದ ಸಂಬಂಧ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಬಳಿ ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿಯವರು, ಸುಪ್ರೀಂಕೋರ್ಟ್ ಬಳಿ ಇಂದು ಸ್ಪಷ್ಟೀಕರಣ ಅರ್ಜಿಯನ್ನು ಸಲ್ಲಿಸಿದ್ದಾರೆ. 
ಅರ್ಜಿಯಲ್ಲಿ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ಕುರಿತ ನಿಬಂಧನೆಗಳನ್ನು ಮಾರ್ಪಡಿಸಬಹುದೇ ಎಂದು ಕೇಳಲಾಗಿದೆ, ಅಲ್ಲದೆ, ನಿರ್ವಹಣಾ ಮಂಡಳಿ ರಚನೆಗೆ ಮೂರು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ. 
ಕಳೆದ ಫೆಬ್ರವರಿ 16ರಂದು ಸುಪ್ರೀಂಕೋರ್ಟ್ ಕಾವೇರಿ ವಿವಾದ ಕುರಿತಂತೆ ಅಂತಿಮ ತೀರ್ಪು ನೀಡಿದ್ದು, 6 ವಾರಗಳೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶದಂತೆ ಆರು ವಾರಗಳ ಗಡುವು ಪೂರ್ಣಗೊಂಡಿದ್ದರೂ, ಕೇಂದ್ರ ಸರ್ಕಾರ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಿಲ್ಲ ಎಂದು ಹೇಳಿದ್ದ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಬಳಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. 
SCROLL FOR NEXT