ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾವೇರಿ ವಿವಾದ: ಚೆನ್ನೈ ಮರಿನಾ ಬೀಚ್ ನಲ್ಲಿ ಮಿಂಚಿನ ಪ್ರತಿಭಟನೆ

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ವಿಫಲವಾದ ಕೇಂದ್ರ....

ಮರಿನಾ ಬೀಚ್ ನ ವೈಮಾನಿಕ ನೋಟ
Lingaraj Badiger
Updated On : 31 Mar 2018, 6:31 am
ಚೆನ್ನೈ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ವಿಫಲವಾದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಚೆನ್ನೈನ ಮರಿನಾ ಬೀಚ್ ನಲ್ಲಿ ನೂರಾರು ಮಂದಿ ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ಮಿಂಚಿನ ಪ್ರತಿಭಟನೆ ನಡೆಸಿದರು.
ಇಂದು ಬೆಳಗ್ಗೆಯಷ್ಟೇ ಮರಿನಾ ಬೀಚ್ ನಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಸಂದೇಶ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಬೀಚ್ ನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ಮರಿನಾ ಬೀಚ್ ನ ವಿವಿಧ ಸ್ಥಳಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. 

Advertisement

Advertisement

ಈ ಮಧ್ಯ, ಬೀಚ್ ಗೆ ಬರುವ ಪ್ರತಿಯೊಬ್ಬರು ಬಿತ್ತಿಪತ್ರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸದ ಪೊಲೀಸರು ಪ್ರತಿಭಟನಾಕಾರರನ್ನು ಬೀಚ್ ನಿಂದ ತೆರವುಗೊಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement